ಚಾಮರಾಜನಗರ/ ಗುಂಡ್ಲುಪೇಟೆ : ಪಟ್ಟಣದ ಪುರಸಭೆಯ ಆವರಣದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಗಿಲ್ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕಾವಲು ಪಡೆಯ ತಾಲ್ಲೂಕು ಅಧ್ಯಕ್ಷರಾದ ಎ.ಅಬ್ದುಲ್ ಮಾಲಿಕ್ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದರು. ಇದೇ ವೇಳೆ ಪುರಸಭೆ ಮುಖ್ಯಾಧಿಕಾರಿಗಳಾದ ಶರವಣ ಮಾತನಾಡಿ ಸಂಘಟನೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಯುವ ವಿಜ್ಞಾನಿ ಡಾ. ನವೀನ್ ಮೌರ್ಯ ಮಾತನಾಡಿ ಕಾರ್ಗಿಲ್ ಬಗ್ಗೆ ಹಲವು ವಿಚಾರಗಳನ್ನು ತಿಳಿಸಿದರು. ಸಾಹಿತಿ ಕಾಳಿಂಗಸ್ವಾಮಿ ಸಿದ್ದಾರ್ಥ ಮಾತನಾಡಿ ಕಾವಲು ಪಡೆಯ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕನ್ನಡಪರ ಹಿರಿಯ ಹೋರಾಟಗಾರರಾದ ಬ್ರಹ್ಮಾನಂದ್ ಮಾತನಾಡಿ ವೀರ ಯೋಧರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ವೇಳೆ ಚಾಮರಾಜನಗರ ಜಿಲ್ಲಾ ಕಾರ್ಯಧ್ಯಕ್ಷರಾದ ಅಬ್ದುಲ್ ರಷೀದ್, ತಾಲ್ಲೂಕು ಗೌರವಾಧ್ಯಕ್ಷರಾದ ರಾಮೇಗೌಡ, ತಾಲ್ಲೂಕು ಸಂಚಾಲಕರಾದ ಕುಂಜುಟ್ಟಿ, ಟೌನ್ ಉಪಾಧ್ಯಕ್ಷರಾದ ಸಾದಿಕ್ ಪಾಷ, ಟೌನ್ ಸಂಚಾಲಕರಾದ ಮಿಮಿಕ್ರಿ ರಾಜು, ಡ್ಯಾನ್ಸರ್ ಪವನ್, ತೊಂಡವಾಡಿ ಶಿವಯ್ಯ, ಕಂಪ್ಯೂಟರ್ ಮಂಜು, ವಕೀಲರಾದ ರಾಜೇಶ್, ಮನೋಜ್ ಸೇರಿದಂತೆ ಪುರಸಭೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.
ವರದಿ ಗುಂಡ್ಲುಪೇಟೆ ಕುಮಾರ್



















