ಬಳ್ಳಾರಿ/ ಕಂಪ್ಲಿ: ತಾಲೂಕಿನ ಎಮ್ಮಿಗನೂರ ಗ್ರಾಮದ ಸರಕಾರಿ ಶತಮಾನ ಶಾಲೆಯಲ್ಲಿ ಮಕ್ಕಳಿಗೆ ಎಚ್ ಬಿ ಹಿಮೋಗ್ಲೋಬಿನ್ ಪರೀಕ್ಷೆಯನ್ನು ನಡೆಸಲಾಯಿತು.
ಈ ವೇಳೆ ಮುಖ್ಯಗುರು ಬಿ. ಎಸ್. ಸದ್ದೋಜಾತಪ್ಪ ಮಾತನಾಡಿ ಪ್ರತಿಯೊಬ್ಬ ಮಕ್ಕಳು ಪೌಷ್ಟಿಕ ಅಂಶ ಆಹಾರವನ್ನು ಸೇವಿಸುವ ಮೂಲಕ ದೇಹದಲ್ಲಿ ರಕ್ತದ ಪ್ರಮಾಣವನ್ನು ಹೆಚ್ಚಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಒಂದು ವೇಳೆ ರಕ್ತದ ಪ್ರಮಾಣ ಕಡಿಮೆಯಾದರೆ ಅನಾರೋಗ್ಯಕ್ಕೆ ತುತ್ತಾಗುವ ಸಂದರ್ಭ ಇರುತ್ತದೆ ಎಂದರು.
ಈ ಸಂದರ್ಭದಲ್ಲಿ ಕಂಪ್ಲಿ ಸಮುದಾಯ ಕೇಂದ್ರದ ಮಂಜುನಾಥ ಶಿಕ್ಷಕರಾದ ರಾಮಪ್ಪ ಎಸ್. ಮೀನಾಕ್ಷಿ, ಆಶಾ ಕಾರ್ಯಕರ್ತೆಯರಾದ ಗಂಗಮ್ಮ, ಈರಮ್ಮ, ಇಂದ್ರಮ್ಮ, ಹೊನ್ನಮ್ಮ ಸೇರಿದಂತೆ ಇತರರು ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ



















