ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹೋರಾಟಗಾರರಿಗೆ ಸರ್ಕಾರ ಸೂಕ್ತ ರಕ್ಷಣೆ ನೀಡುವಂತೆ ಕನ್ನಡ ಚಳವಳಿಗಾರ ತೇಜಸ್ವಿ ಮನವಿ

ಮೈಸೂರು: ರಾಜ್ಯದಲ್ಲಿನ ಕನ್ನಡ ಚಳವಳಿಗಾರರು ಮತ್ತು ಸಾಮಾಜಿಕ ಹೋರಾಟಗಾರರಿಗೆ ಸರ್ಕಾರ ಸೂಕ್ತ ರಕ್ಷಣೆ ನೀಡಬೇಕೆಂದು ಕನ್ನಡ ಚಳವಳಿಗಾರ ತೇಜಸ್ವಿ ಮನವಿ ಮಾಡಿದ್ದಾರೆ.

ಸಮಾಜದಲ್ಲಿ ಅನ್ಯಾಯ ನಡೆಯುತ್ತಿದ್ದಾಗ ಮತ್ತು ಅಕ್ರಮಗಳು ಕಂಡಾಗ ಕನ್ನಡ ಚಳವಳಿಗಾರರು ಮತ್ತು ಸಾಮಾಜಿಕ ಹೋರಾಟಗಾರರು ವಿರೋಧ ಪಕ್ಷಗಳ ರೀತಿ ಹೋರಾಟದ ಮೂಲಕ ಸರ್ಕಾರದ ಗಮನಕ್ಕೆ ತರುವಂತಹ ಕಾರ್ಯಗಳನ್ನು ಈ ಹಿಂದಿನಿಂದಲೂ ಮಾಡುತ್ತಾ ಬಂದಿದ್ದಾರೆ.

ರಾಜ್ಯದಲ್ಲಿರುವ ಇಂತಹ ಹೋರಾಟಗಾರರಿಗೆ ಸರ್ಕಾರ ಸೂಕ್ತ ರಕ್ಷಣೆ ಒದಗಿಸಬೇಕಿದೆ.
ಹೋರಾಟಗಾರರು ತಮ್ಮ ಜೀವನವನ್ನೇ ತ್ಯಾಗ ಮಾಡಿ ನಾಡು ನುಡಿ ನೆಲ ಜಲ ಭಾಷೆ ವಿಷಯದಲ್ಲಿ ಮತ್ತು ಭ್ರಷ್ಟಾಚಾರ ನಿರ್ಮೂಲನೆಗಾಗಿ ಹಾಗೂ ಅಕ್ರಮ ಚಟುವಟಿಕೆಗಳ ವಿರುದ್ಧ ರೌಡಿ ಚಟುವಟಿಕೆಗಳನ್ನು ಶಾಶ್ವತವಾಗಿ ಮಟ್ಟಹಾಕುವಂತೆ ನಿರಂತರವಾಗಿ ಹೋರಾಟ ನಡೆಸುತ್ತಾ ಬಂದಿದ್ದಾರೆ.

ಪ್ರಸಕ್ತ ಧರ್ಮಸ್ಥಳ ವಿಚಾರವೂ ದೇಶಾದ್ಯಂತ ಸಂಚಲನ ಮೂಡಿಸಿದೆ ಇದರ ಮುಂಚೂಣಿ ಹೋರಾಟಗಾರರಿಗೆ ರಾಜ್ಯ ಸರ್ಕಾರ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ತೇಜಸ್ವಿ ಕೋರಿದ್ದಾರೆ.

ಮೈಸೂರಿನಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡುತ್ತಿದ್ದಾರೆ ಎಂದು ನಗರ ಪಾಲಿಕೆಗೆ ದೂರು ನೀಡಿದ ರಮೇಶ್ ಕುಮಾರ್ ಮಾಲಿ ಎಂಬುವವರ ಮೇಲೆ ಮಾಜಿ ನಗರ ಪಾಲಿಕೆ ಸದಸ್ಯ ಹಲ್ಲೆ ಮಾಡಿದ್ದಾರೆ.

ಇಂತಹ ಪ್ರಭಾವಿಗಳ ವಿರುದ್ಧ ಹೋರಾಟ ನಡೆಸುತ್ತಾ ಬಂದಿರುವ ಹೋರಾಟಗಾರರನ್ನು ಗುರುತಿಸಿ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ರಾಜ್ಯ ಸರ್ಕಾರವನ್ನು ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!