ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಶೇಷ ಚೇತನ ಅಭ್ಯರ್ಥಿಗಳಿಗೆ ಉದ್ಯೋಗ ಮೇಳ

ಬೆಂಗಳೂರು : ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕೇಂದ್ರ ಮತ್ತು ಯೂಥ್ 4 ಜಾಬ್ಸ್, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ವಿಶೇಷ ಚೇತನ ಅಭ್ಯರ್ಥಿಗಳಿಗಾಗಿ ಜುಲೈ 29 ರಂದು ಬೆಳಿಗ್ಗೆ 10.00 ಗಂಟೆಗೆ ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಛೇರಿ, ಸಿ.ಓ.ಇ. ಕಟ್ಟಡ , ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಆವರಣ, ತುಮಕೂರು ರಸ್ತೆ (ಮಾಡ್ರನ್ ಬ್ರೆಡ್ ಪ್ಯಾಕ್ಟರಿ ಹತ್ತಿರ), ಬೆಂಗಳೂರು-560022 ಇಲ್ಲಿ “ಉದ್ಯೋಗ ಮೇಳ” ವನ್ನು ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ 15 ಕ್ಕೂ ಅಧಿಕ ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು ತಮ್ಮ ಕಂಪನಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಲಾಗುವುದು.

ಎಸ್.ಎಸ್.ಎಲ್.ಸಿ. ಉತ್ತೀರ್ಣ / ಅನುತ್ತೀರ್ಣ/ಪಿ.ಯು.ಸಿ/ಪದವಿ ಮತ್ತು ಇತರೆ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ, ಯು.ಡಿ.ಐ.ಡಿ ದಾಖಲೆ ಮತ್ತು ಇತ್ತೀಚಿನ ಭಾವಚಿತ್ರಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಪ್ರವೇಶ ಉಚಿತವಾಗಿದ್ದು, ಯಾವುದೇ ಶುಲ್ಕ ಇರುವುದಿಲ್ಲ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಕಂಪನಿಗಳು ತಮ್ಮ ಕಂಪನಿಗಳ ನಿಯಮಾನುಸಾರ ವೇತನ & ಇತರೆ ಭತ್ಯೆಗಳನ್ನು ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕೇಂದ್ರ, ಸಿ.ಒ.ಇ ಕಟ್ಟಡ, ತುಮಕೂರು ರಸ್ತೆ, ಬೆಂಗಳೂರು- 560022 ಅಥವಾ ದೂರವಾಣಿ ಸಂಖ್ಯೆ: 080-29752338 ಮತ್ತು ಮೊಬೈಲ್ ಸಂಖ್ಯೆ 9945809276 / 7795739724 / 7019769281 ಅನ್ನು ಸಂಪರ್ಕಿಸಬಹುದುದಾಗಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಾಕಾಂಕ್ಷಿಗಳು ಈ ಮೇಳದಲ್ಲಿ ಭಾಗವಹಿಸುವ ಮೂಲಕ ಉದ್ಯೋಗಮೇಳದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಬೆಂಗಳೂರು, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕೊಡಕ್ಕಲ್ ಶಿವಪ್ರಸಾದ್.
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!