ಬಳ್ಳಾರಿ/ ಕಂಪ್ಲಿ : ಸೇತುವೆ ಬಂದ್ ಆಗಿದೆ ತುಂಗಭದ್ರಾ ನದಿಗೆ ಹೆಚ್ಚಿನ ನೀರು ಹರಿಸುತ್ತಿರುವುದರಿಂದ ಸೇತುವೆ ಮುಳುಗಡೆಯಾಗುವ ಭೀತಿ ಇದೆ, ಆದ್ದರಿಂದ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಕಂಪ್ಲಿ ಮತ್ತು ಗಂಗಾವತಿ ನಡುವಿನ ಸಂಪರ್ಕ ಕಡಿತಗೊಂಡಿದೆ. ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ. ಇದರಿಂದಾಗಿ ಕಂಪ್ಲಿ ಸೇತುವೆ ಮುಳುಗುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಸೇತುವೆಯ ಮೇಲೆ ಸಂಚಾರವನ್ನು ನಿಷೇಧಿಸಲಾಗಿದೆ.
ಸೇತುವೆ ಮುಳುಗಡೆಯಾದರೆ, ಗಂಗಾವತಿ ತಲುಪಲು 10 ಕಿಮೀ ಬದಲಾಗಿ 30 ಕಿಮೀ ಸುತ್ತು ಬಳಸಿ ಹೋಗಬೇಕಾಗುತ್ತದೆ. ಇದರಿಂದ ಕಂಪ್ಲಿ, ಗಂಗಾವತಿ ಭಾಗದ ಜನರಿಗೆ ತೊಂದರೆಯಾಗುತ್ತದೆ.
ಕಂಪ್ಲಿ ಸೇತುವೆ ಬಂದ್ ಆಗಿರುವುದರಿಂದ, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ.
ವರದಿ : ಜಿಲಾನಸಾಬ್ ಬಡಿಗೇರ



















