ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಮಾಜ ಸೇವೆಯಲ್ಲಿ ನಿಜಸುಖಿ ಪ್ರಶಸ್ತಿಗೆ ಶಿಕ್ಷಕ ಭಗವಂತ ಕಿರಣಗಿ ಆಯ್ಕೆ

ಕಲಬುರಗಿ : ಜಿಲ್ಲೆಯ ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮದ ಕರಿಬಸವೇಶ್ವರ ಪ್ರೌಢ ಶಾಲೆಯಲ್ಲಿ ಸೇವೆ ಗೈದ ಶಿಕ್ಷಕರು ಭಗವಂತ ಹಡಪದ ಅವರು ‘ನಿಜಸುಖಿ” ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.
ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ ಸಮಾಜ ಹಾಗೂ ನಿಜಸುಖಿ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಜುಲೈ 31 ರಂದು ನಗರದಲ್ಲಿ ಸುವರ್ಣ ಸಭಾ ಭವನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಬೆಳಿಗ್ಗೆ ೧೧ ಗಂಟೆಗೆ ಕಾರ್ಯಕ್ರಮ ಜರುಗಲಿರುವ ಸಮಾಜಮುಖಿ ಕಾರ್ಯಕ್ರಮದಲ್ಲಿ ರಾಜ್ಯ ಹಡಪದ ಸಮಾಜದ ಮಾಜಿ ಕಾರ್ಯಾಧ್ಯಕ್ಷರು ಮತ್ತು ಕಲಬುರಗಿ ಜಿಲ್ಲೆಯ ಅಧ್ಯಕ್ಷರಾದ ಈರಣ್ಣ ಸಿ ಹಡಪದ ಸಣ್ಣೂರ ಅವರ ೪೧ ನೇ ಹುಟ್ಟು ಹಬ್ಬದ ಉತ್ಸವದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವದು. ಸುಮಾರು 25 ವರ್ಷಗಳಿಂದ ಶೈಕ್ಷಣಿಕ, ಸಾಹಿತ್ಯಿಕ ಹಾಗೂ ವಿವಿಧ ರಂಗದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ . ಜಿಲ್ಲಾ ವಿಶ್ವಕರ್ಮ ಸಮಾಜದ ವತಿಯಿಂದ ಸಹ ‘ಅತ್ಯುತ್ತಮ ಸಮಾಜ ಸೇವಕ” ಎಂಬ ಪ್ರಶಸ್ತಿ ನೀಡಿ ಗೌರವಿಸಿದರು ಮತ್ತು ಅವರು , ಎಲೆಮರೆ ಕಾಯಿಯಂತೆ ಸಮಾಜಮುಖಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಾದ ಮತ್ತು ಕಲಬುರಗಿ ಜಿಲ್ಲೆಯ ಹಡಪದ ಸಮಾಜದ ಕಾರ್ಯಾಧ್ಯಕ್ಷರಾದ ಭಗವಂತ ಹಡಪದ ಕಿರಣಗಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲು ಹೆಮ್ಮೆ ಎನಿಸುತ್ತಿದೆ. ನಾಡಿನ ಶ್ರೇಷ್ಠ ಮಠಾಧೀಶರು ಮತ್ತು ಜನಪ್ರತಿನಿಧಿಗಳು, ಅಧಿಕಾರಿಗಳು, ಬಸವ ಚಿಂತಕರು ಸಮಾಜದ ಬಂಧುಗಳ ಸಮ್ಮುಖದಲ್ಲಿ ಸಮಾರಂಭ ಜರುಗಲಿದೆ ಎಂದು ಕಲಬುರಗಿ ಜಿಲ್ಲೆಯ ಸಂಘಟನಾ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಬಿ ಹಡಪದ. ಸುಗೂರ ಎನ್ ಅವರು ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!