ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗೊಬ್ಬರ ಬೆಲೆ ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ, ಕಂಪ್ಲಿಯಲ್ಲಿ ಪ್ರತಿಭಟಿಸಿದ ಯೂತ್ ಕಾಂಗ್ರೆಸ್

ಬಳ್ಳಾರಿ / ಕಂಪ್ಲಿ : ಗೊಬ್ಬರ ಬೆಲೆ ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ, ಕಂಪ್ಲಿ ವಿಧಾನಸಭಾ ಕ್ಷೇತ್ರ ಮತ್ತು ಕಂಪ್ಲಿ ಬ್ಲಾಕ್ ಯುವ ಕಾಂಗ್ರೇಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಗುರುವಾರ ಪ್ರತಿಭಟಿಸಿ, ನಂತರ ತಹಶೀಲ್ದಾರ್ ಮಂಜುನಾಥ ನಾಯಕಗೆ ಮನವಿ ಪತ್ರ ಸಲ್ಲಿಸಿದರು.
ನಂತರ ಕಂಪ್ಲಿ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ರಿಯಾಜ್ ಅಹಮ್ಮದ್ ಮಾತನಾಡಿ, “ಅಚ್ಚಾದಿನ್ ಆಯೇಗಾ” ಎಂದು ಹೇಳಿಕೊಂಡು ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಹಿಡಿದ ಬಿಜೆಪಿ ಆರಂಭದಿಂದಲೂ ಜನಸಾಮಾನ್ಯರ ಮೇಲೆ ಗದಾಪ್ರಹಾರ ಮಾಡುತ್ತಲೇ ಬಂದಿದೆ. ಇದೀಗ ರೈತರಿಗೆ ಬೆಳೆಗಳಿಗೆ ವಿತರಿಸುವ ರಸಗೊಬ್ಬರದ ಬೆಲೆಗಳನ್ನು ಹೆಚ್ಚಿಸಿರುವುದನ್ನು ಯುವ ಕಾಂಗ್ರೆಸ್ ಘಟಕ ತೀವ್ರವಾಗಿ ಖಂಡಿಸುತ್ತಿದೆ. ಕಳೆದ ವರ್ಷಕ್ಕಿಂತ ಈ ವರ್ಷದಲ್ಲಿ ರಸಗೊಬ್ಬರ ಬೆಲೆ ಏರಿಕೆ ಕಂಡಿದ್ದು, ಇದರಿಂದ ರೈತರಿಗೆ ತುಂಬ ಸಮಸ್ಯೆಯಾಗಿದೆ ಇದೆ ರೀತಿ ರಸಗೊಬ್ಬರಗಳ ಬೆಲೆ ಹೆಚ್ಚಳ ಮಾಡುತ್ತಿರುವ ಕೇಂದ್ರ ಬಿ.ಜೆ.ಪಿ. ಸರ್ಕಾರ ರೈತರ ಮೇಲೆ ಗದ ಪ್ರಯೋಗ ಮಾಡುತ್ತಿದೆ ಇದು ಖಂಡನೀಯವಾಗಿದೆ. ಕೇಂದ್ರ ಬಿ.ಜೆ.ಪಿ. ಸರ್ಕಾರ ರೈತರಿಗೆ ಕಿಸಾನ್ ಸಮ್ಮಾನ್ ಎಂದು ವರ್ಷಕ್ಕೆ 4000 ಗಳನ್ನು ನೀಡಿ ಹಿಂಬಾಗಿಲಿನಿಂದ ಗೊಬ್ಬರ ಔಷಧಿ ಬಿತ್ತನೆ ಬೀಜಗಳ ಬೆಲೆ ಏರಿಕೆ ಮಾಡುವ ಮೂಲಕ ಅದಕ್ಕಿಂದ ದುಪ್ಪಟ್ಟು ಹಣವನ್ನು ರೈತರಿಂದ ವಸೂಲಿ ಮಾಡುತ್ತಿದೆ. ಮಳೆಯ ಅತಿವೃಷ್ಠಿ ಮತ್ತು ಅನಾವೃಷ್ಟಿಯಿಂದ ರೈತರು ಸಂಕಷ್ಟದಲ್ಲಿದ್ದಾರೆ ಬೆಳೆ ಹಾನಿ ಮುಂತಾದ ಕಾರಣಗಳಿಗೆ ರೈತರು ಆತ್ಮಹತ್ಯಗಳು ನಡೆಯುತ್ತದೆ. ಇದರ ಮದ್ಯ ಕೇಂದ್ರ ಬಿ.ಜೆ.ಪಿ. ಸರ್ಕಾರ ಏಕಾ ಏಕಿ ಅವೈಜ್ಞಾನಿಕವಾಗಿ ರಸಗೊಬ್ಬರಗಳ ಬೆಲೆ ಏರಿಸಿದ್ದಾರೆ. ಮೊದಲೇ ಸಂಕಷ್ಟದಲ್ಲಿರುವ ರೈತರು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕೇಂದ್ರ ಸರ್ಕಾರವು ರಸಗೊಬ್ಬರಗಳ ಬೆಲೆ ಮಾಡದಿದ್ದಲ್ಲಿ ಯುವ ಕಾಂಗ್ರೆಸ್ ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗಿದೆ. ಆದ್ದರಿಂದ ಗೌರವಾನ್ವಿತ ರಾಷ್ಟ್ರಪತಿಗಳು ಮದ್ಯ ಪ್ರವೇಶಿಸಿ ಕೇಂದ್ರ ಸರ್ಕಾರ ಹೆಚ್ಚಳ ಮಾಡುತ್ತಿರುವ ರಸಗೊಬ್ಬರಗಳ ಬೆಲೆ ಇಳಿಕೆ ಮಾಡುವಂತೆ ಸೂಕ್ತ ನಿರ್ದೇಶನ ಮಾಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಉಸ್ಮಾನ್, ಸದಸ್ಯರಾದ ಸಿ.ಆರ್.ಹನುಮಂತ, ವೀರಾಂಜಿನೀಯಲು, ಎಪಿಎಂಸಿ ಅಧ್ಯಕ್ಷ ಹಬೀಬ್ ರೆಹಮಾನ್, ಕಂಪ್ಲಿ ಬ್ಲಾಕ್ ಯುವ ಕಾಂಗ್ರೇಸ್ ಸಮಿತಿ ಅಧ್ಯಕ್ಷ ಗುರು, ಮುಖಂಡರಾದ ಬಿ.ಸಿದ್ದಪ್ಪ, ಕರೇಕಲ್ ಮನೋಹರ, ರಘುನಾಯಕ, ಜಾಫರ್, ಪೇಂಟರ್ ಮಸ್ತಾನ್, ಸುಧಾಕರ, ನಾಗರಾಜ, ರುದ್ರಮನಿ, ಹುಲುಗಪ್ಪ, ಯು.ಖಾಜಾ ಹುಸೇನ್, ಸಿರಾಜ್, ಜಿಲಾನ್, ಆದಿಲ್ ಭಾಷಾ, ಮುಸ್ತಾಕ್, ಶಫಿ, ವಾಹೀದ್, ರಾಜ, ಮಹ್ಮದ್, ಮಂಜು, ಮೈಬು, ರಾಘು, ಸಾದಿಕ್, ವಿಬಿ ನಾಗರಾಜ, ಲಬೇದ್ ವಿರೇಶ ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!