ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಎಂ. ಪಿ. ಎಂ ಕಾರ್ಖಾನೆ ಪುನರಾರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಶಾಸಕ ಬಿ. ಕೆ. ಸಂಗಮೇಶ್ವರ್ ಮನವಿ

ಭದ್ರಾವತಿ: ಮುಖ್ಯಮಂತ್ರಿ ಸಿದ್ದರಾಮಯ್ಯರವರು ಖುದ್ದಾಗಿ ಎಲ್ಲಾ ಕ್ಷೇತ್ರಗಳ ಶಾಸಕರ ಅಹವಾಲುಗಳನ್ನು ಸ್ವೀಕರಿಸುತ್ತಿದ್ದು, ಕರ್ನಾಟಕ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಮತ್ತು ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್‌ ರವರು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಎಂಪಿಎಂ ಕಾರ್ಖಾನೆ ಪುನರಾರಂಭ ಮಾಡುವಂತೆ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಇಂದು ರಾಜಧಾನಿಯಲ್ಲಿ ಶಿವಮೊಗ್ಗ ಜಿಲ್ಲಾ ಶಾಸಕರ ಸಭೆಯಲ್ಲಿ ಬಹುಮುಖ್ಯವಾಗಿ ಭದ್ರಾವತಿ ಕ್ಷೇತ್ರದ ಮೈಸೂರು ಕಾಗದ ಕಾರ್ಖಾನೆ ಪುನರ್ ಆರಂಭಿಸುವಂತೆ ಶಾಸಕರು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ. ಕ್ಷೇತ್ರದಲ್ಲಿ ಕಾರ್ಮಿಕರು ಹೆಚ್ಚಾಗಿದ್ದು, ಎಂಪಿಎಂ ಮತ್ತು ವಿಐಎಸ್‌ಎಲ್‌ ಎರಡು ಕಾರ್ಖಾನೆಗಳನ್ನು ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಎಂಪಿಎಂ ಕಾರ್ಖಾನೆ ಸ್ಥಗಿತಗೊಂಡು ಸುಮಾರು 10 ವರ್ಷಗಳು ಕಳೆಯುತ್ತಿವೆ.

ಕ್ಷೇತ್ರದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಕಾರ್ಖಾನೆ ಪುನ‌ರ್ ಆರಂಭಿಸುವ ಮೂಲಕ ಉದ್ಯೋಗ ಕಲ್ಪಿಸಿಕೊಡುವಂತೆ ಕೋರಿದ್ದಾರೆ.

ಉಳಿದಂತೆ ಕ್ಷೇತ್ರದಲ್ಲಿನ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಶಾಸಕರು ಮನವಿ ಸಲ್ಲಿಸಿದ್ದು, ಮುಖ್ಯಮಂತ್ರಿ ಸಿದ್ದರಾ ಮಯ್ಯರವರು ಬಹುತೇಕ ಬೇಡಿಕೆಗಳಿಗೆ ಪೂರಕವಾಗಿ ಸ್ಪಂದಿಸಿದ್ದಾರೆಂದು ತಿಳಿದು ಬಂದಿದೆ. ಸಿದ್ದರಾಮಯ್ಯರವರನ್ನು ಶಾಸಕರು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ
ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಾಗರ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಮುಂತಾದವರು ಉಪಸ್ಥಿತರಿದ್ದರು.

ವರದಿ ಕೆ. ಆರ್. ಶಂಕರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!