ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ಪ್ರಕ್ರಿಯೆ ಶುರು: ಹೊಸ ಅಪ್ಡೇಟ್ ಕೊಟ್ಟ ಸಚಿವ ಜೋಶಿ

ಧಾರವಾಡ : ಕರ್ನಾಟಕ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನಕ್ಕೆ ವರಿಷ್ಠರು ಯಾರನ್ನು ಆಯ್ಕೆ ಮಾಡಬಹುದು ಎನ್ನುವ ಗೊಂದಲ ಇನ್ನೂ ಮುಂದುವರಿದಿದೆ. ರೆಬೆಲ್ ಟೀಂ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿದ್ದರೆ, ಮತ್ತೊಂದೆಡೆ ವಿಜಯೇಂದ್ರ ಅವರನ್ನೇ ಮುಂದುವರಿಸಬೇಕೆಂದು ಮತ್ತೊಂದು ಬಣ ಬಿಗಿಪಟ್ಟು ಹಿಡಿದಿದೆ. ಹೀಗಾಗಿ ಬೇರೆ ಹಲವು ರಾಜ್ಯಗಳಲ್ಲಿ ಅಧ್ಯಕ್ಷರ ಘೋಷಣೆಯಾಗಿದ್ದರೂ, ಕರ್ನಾಟಕ, ಉತ್ತರ ಪ್ರದೇಶ, ಗುಜರಾತ್ ಮುಂತಾದ ರಾಜ್ಯಗಳಲ್ಲಿ ಇನ್ನೂ ಹೆಸರು ಘೋಷಣೆಯಾಗದೇ ವಿಳಂಬವಾಗಿತ್ತು. ಈ ನಡುವೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೊಸ ಅಪ್ಡೇಟ್ ಕೊಟ್ಟಿದ್ದು, ವಿಳಂಬವಾಗಿದ್ದ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮತ್ತೆ ಶುರುವಾಗಿದೆ. ರಾಜ್ಯ ಬಿಜೆಪಿ ಘಟಕಕ್ಕೆ ಅವಿರೋಧವಾಗಿ ಅಧ್ಯಕ್ಷರ ಆಯ್ಕೆ ಆಗಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಧಾರವಾಡದಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ ಅಥವಾ ಬಿ.ವೈ.ವಿಜಯೇಂದ್ರ ಸೇರಿ ಯಾರೇ ಆಗಲಿ. ರಾಜ್ಯ ಬಿಜೆಪಿ ಘಟಕಕ್ಕೆ ಅವಿರೋಧವಾಗಿ ಅಧ್ಯಕ್ಷರ ಆಯ್ಕೆ ಆಗಲಿದೆ. ಎಲ್ಲಾ ರಾಜ್ಯಗಳಲ್ಲೂ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಅದರ ಜೊತೆ ನಮ್ಮ ರಾಜ್ಯ ಬಿಜೆಪಿಗೂ ಅಧ್ಯಕ್ಷ ಆಯ್ಕೆ ಆಗಲಿದೆ ಎಂದು ಹೇಳಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!