ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಆರೋಪಿಗೆ ಕಂಪ್ಲಿಯಿಂದ ಕನಕಪುರಕ್ಕೆ ಗಡಿಪಾರು : ಸಮಾಜದ ಸ್ವಾಸ್ಥ್ಯ ಕಾಪಾಡುವ ಉದ್ದೇಶದಿಂದ ಕ್ರಮ

ಬಳ್ಳಾರಿ / ಕಂಪ್ಲಿ :2014ನೇ ಸಾಲಿನಲ್ಲಿ ಕಂಪ್ಲಿ ಪಟ್ಟಣದ ಎಂ.ಡಿ ಕ್ಯಾಂಪ್ ನಿವಾಸಿ ದೌಲಾಸಾಬ್ (ವಯಸ್ಸು 30), ತಂದೆ ಹುಸೇನ್ ಸಾಬ್ ಮೇಲೆ ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿ ಮೇಲಿನ ಅತ್ಯಾಚಾರ ಆರೋಪದಲ್ಲಿ ಕಂಪ್ಲಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 366(ಎ), 506, 376, 114 ಮತ್ತು ಪಾಕ್ಸೋ ಕಾಯ್ದೆ 4 & 6, ಹಾಗು ಎಸ್‌ಸಿ/ಎಸ್‌ಟಿ (ಅತ್ಯಾಚಾರ, ಭಯೊತ್ಪಾದನೆ) ಕಾಯ್ದೆಯ 3(2)(5) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಆರೋಪಿಗೆ 2014 ರಿಂದ 2023 ರವರೆಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು. ಜೈಲಿನಿಂದ ಬಿಡುಗಡೆಯಾದ ನಂತರ ಈತ ಪುನಃ ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದು, 2025 ಮೇ 10ರಂದು ಶಿಕಾರಿಹಟ್ಟಿ ಕಾಲೋನಿಯ ಬಾಲಕನ ಮೇಲೆ ಹಲ್ಲೆ ಮಾಡಿದ ಪ್ರಕರಣ ಕೂಡಾ ದಾಖಲಾಗಿತ್ತು.

ಆತನಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲದ ಹಿನ್ನೆಲೆಯಲ್ಲಿ, ಸಾರ್ವಜನಿಕ ಶಾಂತಿ ಮತ್ತು ಸಮಾಜದ ಭದ್ರತೆಗೆ ಭಂಗ ಆಗದಂತೆ ನೋಡಿಕೊಳ್ಳಲು, ಕರ್ನಾಟಕ ಪೊಲೀಸ್ ಕಾಯ್ದೆ 1963ರ ಸೆಕ್ಷನ್ 55(ಎ) ಅಡಿಯಲ್ಲಿ ಜಿಲ್ಲಾಧಿಕಾರಿ ಆದೇಶದಂತೆ ದೌಲಾಸಾಬ್ ಅವರನ್ನು ಬಳ್ಳಾರಿ ಜಿಲ್ಲೆಯಿಂದ ರಾಮನಗರ ಜಿಲ್ಲೆಯ ಕನಕಪುರ ಪಟ್ಟಣಕ್ಕೆ 3 ತಿಂಗಳ ಕಾಲ ಗಡಿಪಾರು ಮಾಡಲಾಗಿದೆ.

ಈತನನ್ನು ಕನಕಪುರ ಪೊಲೀಸ್ ಠಾಣೆಯ ಅಧೀನಕ್ಕೆ ಹಸ್ತಾಂತರಿಸಲಾಗಿದೆ ಎಂದು ಹಾಗೂ ಯುವಕರು ಕಾನೂನಿನ ಚೌಕಟ್ಟಿನಲ್ಲಿರಬೇಕು ಯಾವುದೇ ಅಪರಾಧವನ್ನು ಮಾಡಬಾರದು ಎಂದು ಕಂಪ್ಲಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!