ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಐತಿಹಾಸಿಕ ಗೆಲುವು :77 ವರ್ಷಗಳ ಬರ ನೀಗಿಸಿಕೊಂಡ ಟೀಂ ಇಂಡಿಯಾ..

ಇಂಗ್ಲೆಂಡ್‌ : ಸೋಲಿನೊಂದಿಗೆ ಇಂಗ್ಲೆಂಡ್‌ ಪ್ರವಾಸವನ್ನು ಆರಂಭಿಸಿದ್ದ ಟೀಂ ಇಂಡಿಯಾ (India vs England) ಇದೀಗ ಓವಲ್ ಟೆಸ್ಟ್ ಪಂದ್ಯವನ್ನು 6 ರನ್​ಗಳಿಂದ ಗೆದ್ದುಕೊಳ್ಳುವ ಮೂಲಕ ಅಂತ್ಯಗೊಳಿಸಿದೆ. ಒಂದು ಹಂತದಲ್ಲಿ ಸರಣಿ ಕಳೆದುಕೊಳ್ಳುವ ಆತಂಕದಲ್ಲಿದ್ದ ಟೀಂ ಇಂಡಿಯಾ (Team India), ಇಬ್ಬರು ವೇಗಿಗಳ ಅಮೋಘ ಪ್ರದರ್ಶನಿಂದ ಕೊನೆಯ ಟೆಸ್ಟ್ ಪಂದ್ಯವನ್ನು ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಯಿತು. ಓವಲ್ ಟೆಸ್ಟ್ ಗೆಲುವಿನೊಂದಿಗೆ ಸರಣಿಯನ್ನು 2-2 ರಿಂದ ಅಂತ್ಯಗೊಳಿಸಿದ ಟೀಂ ಇಂಡಿಯಾ 77 ವರ್ಷಗಳ ದೀರ್ಘ ಕಾಯುವಿಕೆಯನ್ನು ಸಹ ಕೊನೆಗೊಳಿಸಿದೆ. ಇದು ಮಾತ್ರವಲ್ಲದೆ ಓವಲ್ ಟೆಸ್ಟ್ ಗೆಲುವು ಭಾರತೀಯ ಕ್ರಿಕೆಟ್‌ಗೆ ಹಲವು ವಿಧಗಳಲ್ಲಿಯೂ ವಿಶೇಷವಾಗಿತ್ತು.

77 ವರ್ಷಗಳ ಬರ ಅಂತ್ಯ ವಾಸ್ತವವಾಗಿ, ಭಾರತ ತಂಡವು ವಿದೇಶಿ ನೆಲದಲ್ಲಿ ಐದು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯವನ್ನು ಗೆದ್ದಿರುವುದು ಇದೇ ಮೊದಲು. ಭಾರತ ಈ ಹಿಂದೆ ವಿದೇಶದಲ್ಲಿ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು 16 ಬಾರಿ ಆಡಿದೆ, ಆದರೆ ಪ್ರತಿ ಬಾರಿಯೂ ಕೊನೆಯ ಟೆಸ್ಟ್‌ನಲ್ಲಿ ಸೋಲನುಭವಿಸಿತ್ತು. ಆದಾಗ್ಯೂ, ಈ ಬಾರಿ, ಭಾರತೀಯ ಆಟಗಾರರು ಅದ್ಭುತ ಪ್ರದರ್ಶನದೊಂದಿಗೆ ಇತಿಹಾಸವನ್ನು ಸೃಷ್ಟಿಸಿದರು. ಓವಲ್ ಮೈದಾನದಲ್ಲಿ ನಡೆದ ಈ ನಿರ್ಣಾಯಕ ಪಂದ್ಯದಲ್ಲಿ, ಭಾರತೀಯ ಬೌಲರ್‌ಗಳು ಮತ್ತು ಬ್ಯಾಟ್ಸ್‌ಮನ್‌ಗಳು ಸಾಂಘಿಕ ಪ್ರದರ್ಶನ ನೀಡಿ ಪಂದ್ಯವನ್ನು ಗೆದ್ದುಕೊಂಡರು.

ಪಂದ್ಯದ ಐದನೇ ದಿನದಾಟ ಎಷ್ಟು ರೋಮಾಂಚನಕಾರಿಯಾಗಿತ್ತೆಂದರೆ, ಇಂಗ್ಲೆಂಡ್ ಗೆಲುವಿಗೆ ಕೇವಲ 35 ರನ್ ಬೇಕಿದ್ದರೆ, ತಂಡದ ಬಳಿ ಇನ್ನು 4 ವಿಕೆಟ್‌ಗಳು ಉಳಿದಿದ್ದವು. ಆದರೆ ಕೊನೆಯ ದಿನದ ಮೊದಲ ಸೆಷನ್‌ನಲ್ಲಿ ಭಾರತದ ಇಬ್ಬರು ಬೌಲರ್‌ಗಳು ಇಡೀ ಪಂದ್ಯದ ದಿಕ್ಕನೇ ಬದಲಾಯಿಸಿದರು. ಕೊನೆಯ 4 ವಿಕೆಟ್‌ಗಳಲ್ಲಿ 3 ವಿಕೆಟ್‌ಗಳನ್ನು ಮೊಹಮ್ಮದ್ ಸಿರಾಜ್ ಮತ್ತು 1 ವಿಕೆಟ್ ಅನ್ನು ಪ್ರಸಿದ್ಧ್ ಕೃಷ್ಣ ಪಡೆದರು. ಈ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಒಟ್ಟು 9 ವಿಕೆಟ್‌ಗಳನ್ನು ಪಡೆದರೆ, ಪ್ರಸಿದ್ಧ್ ಕೃಷ್ಣ 8 ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!