ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪಟ್ಟಣದ ರಸ್ತೆ, ವೃತ್ತಗಳ ಮರುನಾಮಕರಣ: ಆಕ್ಷೇಪಣೆಗಳಿಗೆ ಅವಕಾಶ

ಬಳ್ಳಾರಿ/ ಕಂಪ್ಲಿ : ಪುರಸಭೆ ವ್ಯಾಪ್ತಿಯಲ್ಲಿ ಬರುವ ವಿವಿಧ ಬಡಾವಣೆಗಳ ಮುಖ್ಯ ರಸ್ತೆಗಳಲ್ಲಿನ ವೃತ್ತಗಳನ್ನು ಹೊಸದಾಗಿ ನಾಮಕರಣ ಮಾಡುವ ಉದ್ದೇಶದಿಂದ, ಪಟ್ಟಣದ ವಿವಿಧ ಸಮಾಜದವರು ತಮ್ಮ ಬೇಡಿಕೆಗಳನ್ನು ಸಲ್ಲಿಸಿದ್ದು, ಸಾರ್ವಜನಿಕರಿಂದ ಲಿಖಿತ ಆಕ್ಷೇಪಣೆಗಳಿಗೆ ಆಹ್ವಾನ ನೀಡಲಾಗಿದೆ.
ಈ ನಾಮಕರಣದ ಪ್ರಕಾರ –

  1. ನಟರಾಜ ಕಲಾ ಮಂದಿರದ ಮುಂಭಾಗದ ವೃತ್ತವನ್ನು: ದೇವರ ದಾಸಿಮಯ್ಯ ವೃತ್ತ
  2. ನಟರಾಜ ಕಲಾ ಮಂದಿರದ ಮುಂಭಾಗದ ಕಮಾನಿಗೆ: ಶ್ರೀ ಚೌಡೇಶ್ವರ ಮಹಾದ್ವಾರ
  3. ವಿನಾಯಕ ನಗರ 5ನೇ ಅಡ್ಡರಸ್ತೆಯ ಚತುರ್ಮುಖ ರಸ್ತೆಗೆ: ಶ್ರೀ ಮಹಾಯೋಗಿ ವೇಮನ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ವೃತ್ತ
  4. 05ನೇ ವಾರ್ಡ್‌ಗೆ: ಬೀರಲಿಂಗೇಶ್ವರ ನಗರ ಎಂದು ನಾಮಕರಣ ಮಾಡುವ ಉದ್ದೇಶವಿದೆ.

ನಾಮಕರಣ ಕುರಿತಾಗಿ ಯಾರಾದರೂ ಆಕ್ಷೇಪಣೆಗಳನ್ನು ಸಲ್ಲಿಸಬೇಕಾದಲ್ಲಿ, ಲಿಖಿತವಾಗಿ ಮತ್ತು ಸಮಂಜಸ ದಾಖಲೆಗಳೊಂದಿಗೆ ಈ ಪ್ರಕಟಣೆ ಪ್ರಕಟವಾದ ದಿನದಿಂದ 30 ದಿನಗಳ ಒಳಗೆ ಕಂಪ್ಲಿ ಪುರಸಭೆ ಕಚೇರಿಗೆ ಸಲ್ಲಿಸಬಹುದು.

ಅವಧಿ ಮೀರಿದ ನಂತರ ಬಂದ ಯಾವುದೇ ಆಕ್ಷೇಪಣೆ ಅಥವಾ ಮನವಿಗಳನ್ನು ಪರಿಗಣಿಸಲಾಗದು ಎಂದು ಪುರಸಭೆಯ ಪ್ರಭಾರಿ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!