ಬಳ್ಳಾರಿ / ಕಂಪ್ಲಿ : ಸಿಎಂ ಸಿದ್ದರಾಮಯ್ಯ ಜೊತೆ ಸಂಧಾನ ಸಭೆ ವಿಫಲ ಆದ ಕಾರಣ, ಸಾರಿಗೆ ನೌಕರರು ಮುಷ್ಕರ ನಡೆಸಿದ್ದಾರೆ.
ಹಿಂಬಾಕಿ ಬೇಡಿಕೆ, ಸಂಬಳ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಆಗಸ್ಟ್ 5 ರಿಂದ ಅನಿರ್ದಿಷ್ಠಾವಧಿ ಮುಷ್ಕರಕ್ಕೆ ಬೇಡಿಕೆ ಇಡಲಾಗಿದೆ. 1800 ಕೋಟಿ ಹಿಂಬಾಕಿ, ಕೋಟ್ಯಾಂತರ ರೂಪಾಯಿ ಪಿಎಫ್ ಬಾಕಿ, ವೇತನ ಹೆಚ್ಚಳ ಸೇರಿದಂತೆ ಹತ್ತಾರು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಡಲಾಗಿದೆ. ಆದರೆ ಹಿಂಬಾಕಿ ಕೊಡಲು ಸರ್ಕಾರ ಒಪ್ಪದಿದ್ದ ಕಾರಣ, ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲಾಗಿಲ್ಲ.
ಆದ ಕಾರಣ ಕಂಪ್ಲಿಯಲ್ಲಿ ಕೂಡಾ ಬಂದ್ ಎಫೆಕ್ಟ್ ಜೋರಾಗಿದೆ ಪ್ರಯಾಣಿಕರು ಬಸ್ಸಿಗಾಗಿ ಪರದಾಡುತ್ತಿರುವ ದೃಶ್ಯ ಕಂಡು ಬಂದಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಸ್ ನಿಲ್ದಾಣದಲ್ಲಿ ಬಿಗಿಯಾದ ಪೊಲೀಸ್ ಭದ್ರತೆ ಮಾಡಲಾಗಿತ್ತು.
ವರದಿ : ಜಿಲಾನಸಾಬ್ ಬಡಿಗೇರ್



















