ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಮಾಜದ ಜನರು ಶಿಕ್ಷಣದ ಮಹತ್ವ ಅರಿತು ವಿದ್ಯೆಯ ಮೂಲಕ ಸಮಾಜದ ಮಕ್ಕಳು ಉತ್ತಮ ಹಂತಕ್ಕೆ ತಲುಪಬೇಕು :ಶಾಸಕ ಎಂ.ಆರ್ ಮಂಜುನಾಥ್

ಚಾಮರಾಜನಗರ/ಹನೂರು :ತಾಲ್ಲೂಕಿನ ಪುಣ್ಯಕ್ಷೇತ್ರ ಮಲೈ ಮಹದೇಶ್ವರ ಬೆಟ್ಟದ ಮಹದೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ 891ನೇ ಹಡಪದ ಅಪ್ಪಣ್ಣ ಜಯಂತೋತ್ಸವ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕರು ಮಲೆ ಮಹದೇಶ್ವರ ಬೆಟ್ಟದಲ್ಲಿ ಇಡೀ ರಾಜ್ಯದ ಉದ್ದಗಲಕ್ಕೂ ಇರುವಂತಹ ಸವಿತಾ ಸಮಾಜದ ಜನ ಒಂದೆಡೆ ಸೇರಿ ಹಬ್ಬದ ರೀತಿಯಲ್ಲಿ ಅಪ್ಪಣ್ಣ ಜಯಂತಿ ಆಚರಣೆ ಮಾಡುತ್ತಿರುವುದು ಅತ್ಯಂತ ಖುಷಿಯಾದ ಸಂಗತಿಯಾಗಿದೆ, ಅಪ್ಪಣ್ಣ ಜಯಂತಿ ಇಷ್ಟೊಂದು ಅದ್ದೂರಿಯಾಗಿ ನಡೆಯಲು ನಿಮ್ಮಲ್ಲಿರುವ ಉತ್ತಮ ಸಂಘಟನೆ ಗಟ್ಟಿಯಾಗಿದೆ ಎಂದರ್ಥ ಆಗುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಘಟನೆ ಮಾಡುವ ಮೂಲಕ ಎಲ್ಲರೂ ಒಂದಾಗಿ ಬಾಳಬೇಕು. ಜೊತೆಗೆ ಮಕ್ಕಳನ್ನು ಯಾರು ಸಹ ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಿ ಎಂದರು.

ಪ್ರತಿಭಾ ಪುರಸ್ಕಾರ :
ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ಹಾಗೂ ಪದವಿ ಹಂತದಲ್ಲಿ ಹೆಚ್ಚು ಅಂಕ ಪಡೆದ ಸವಿತಾ ಸಮಾಜದ ಮಕ್ಕಳನ್ನು ಕಾರ್ಯಕ್ರಮದಲ್ಲಿ ಸನ್ಮಾನ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಸಲೂರು ಬೃಹನ್ ಮಠದ ಪೀಠಾಧಿಪತಿಗಳಾದ ಡಾ.ಶಾಂತಮಲ್ಲಿಕಾರ್ಜುನ ಸ್ವಾಮಿಗಳು ,ತಂಗಡಗಿ ಹಡಪದ ಅಪ್ಪಣ್ಣ ದೇವರ ಮಹಾಸಂಸ್ಥಾನ ಮಠದ  ಭಾರತಿ ಅಪ್ಪಣ್ಣ ಸ್ವಾಮಿಗಳು, ಸವಿತಾ ಸಮಾಜದ ಚಾ.ನಗರದ ಜಿಲ್ಲಾಧ್ಯಕ್ಷರಾದ ಕೆ.ವಿ ವೆಂಕಟರಾಜು,ಚಾ.ನಗರದ ತಾಲೂಕು ಅಧ್ಯಕ್ಷರಾದ ಬಸವಣ್ಣ ಬದನಗುಪ್ಪೆ, ಗುಂಡ್ಲುಪೇಟೆ ತಾಲ್ಲೂಕು ಅಧ್ಯಕ್ಷ ವಿಠಲ,ಯಳಂದೂರು ತಾ.ಅಧ್ಯಕ್ಷ ಶ್ರೀಕಂಠಸ್ವಾಮಿ,ಕೊಳ್ಳೇಗಾಲ ತಾ.ಅಧ್ಯಕ್ಷ ರಾಚಶೆಟ್ಟಿ,ರಾಮಪುರ ತಾ.ಅಧ್ಯಕ್ಷ ಸಿದ್ದರಾಜು,
ಮಹದೇಶ್ವರ ಬೆಟ್ಟದ ಸವಿತಾ ಸಮಾಜದ ಮಹಿಳಾ ಅಧ್ಯಕ್ಷರಾದ ಸುನಂದ,ಮಲೈ ಮಹದೇಶ್ವರ ಬೆಟ್ಟದ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅರ್ಚನ, ಗ್ರಾಂ ಪಂ ಸದಸ್ಯರಾದ ರತ್ನಮ್ಮ ಹಾಗೂ ಮುಖಂಡರುಗಳಾದ ಡಿ.ಆರ್ ಮಾದೇಶ್,ಜೇಸಿಂ ಪಾಷ,ಗೋಪಾಲ್ ನಾಯಕ,ವಿಜಯ್ ಕುಮಾರ್ ,ಬಸವರಾಜು ಹಾಗೂ ಸಮಾಜದ ಮುಖಂಡರುಗಳು ಉಪಸ್ಥಿತರಿದ್ದರು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!