ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಎಡಗೈ ಸಮುದಾಯಕ್ಕೆ ಶೇ. 7% ರಷ್ಟು ಮೀಸಲಾತಿ ನೀಡಲು ಮಲ್ಲು ಹಲಗಿ ಮನವಿ

ಯಾದಗಿರಿ: ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಮಾದಿಗರು ಅತಿ ಹೆಚ್ಚು ಜನಸಂಖ್ಯಾ ಹೊಂದಿದ್ದು ಒಳ ಮೀಸಲಾತಿ ಜಾರಿ ಮಾಡುವ ಸಂಬಂಧ ನ್ಯಾ.ನಾಗಮೋಹನ್‌ದಾಸ್‌ ಆಯೋಗವು ರಚಿಸಿದ 1700 ಪುಟಗಳ ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದು, ಶೇ.7ರಷ್ಟು ಮೀಸಲಾತಿ ಎಡಗೈ (ಮಾದಿಗ) ಸಮುದಾಯಗಳಿಗೆ ದೊರತರೆ ಸ್ವಲ್ಪ ಉಸಿರಾಡಲು ಅವಕಾಶ ಆಗಲಿದೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ (ಎಂ. ಆರ್.ಎಚ್. ಎಸ್.) ಜಿಲ್ಲಾ ಕಾರ್ಯದರ್ಶಿ ಕುರಕುಂದ ಮಲ್ಲು ಹಲಗಿ ಅವರು ಜನಪ್ರಿಯ ಮುಖ್ಯಮಂತ್ರಿಗಳಾದ ಸರ್ವ ಜನಾಂಗದ ಸರ್ವೋತ್ತಮ ಶ್ರೇಷ್ಠ ಅಹಿಂದ್ ನಾಯಕ ಸನ್ಮನ್ಯ ಶ್ರೀ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಕಳೆದ ಮೂರ್ನಾಲ್ಕು ದಶಕಗಳಿಂದ ಮಾದಿಗ ಸಮುದಾಯಕ್ಕೆ ನ್ಯಾಯ ಬದ್ಧವಾಗಿ ಸಿಗಬೇಕಿರುವ ಮೀಸಲಾತಿ ಸೌಲಭ್ಯಗಳು ಸಿಗುತ್ತಿಲ್ಲ ಈ ಸಂಬಂಧ ಒಳ ಮೀಸಲಾತಿ ಜಾರಿಯಾಗಲು ಮೂರ್ನಾಲ್ಕು ದಶಕಗಳಿಂದ ಹೋರಾಟ ಮಾಡುತ್ತಾ ಬಂದಿದ್ದೇವೆ ಆ.1 ರಂದು ಸುಪ್ರೀಂ ಕೋರ್ಟ್‌ ಇದಕ್ಕೆ ಪೂರಕ ಆದೇಶ ಹೊರಡಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಗಮೋಹನ್‌ದಾಸ್ ಆಯೋಗ ರಚಿಸಿದರು ಇದೀಗ ವರದಿ ಸಲ್ಲಿಕೆಯಾಗಿದ್ದು ಕುತೂಹಲ, ಆತಂಕ ಕಾಡುತ್ತಿದೆ ಎಂದು ಹೇಳಿದರು. ನ್ಯಾ.ಎ.ಜೆ. ಸದಾಶಿವ ಅವರು ಎಡಗೈ ಸಮುದಾಯಗಳಿಗೆ ಶೇ.6 ರಷ್ಟು ಮೀಸಲಾತಿ ಶಿಫಾರಸು ಮಾಡಿದ್ದರು. ಆಗ ಪರಿಶಿಷ್ಟ ಜಾತಿ ಮೀಸಲಾತಿ ಶೇ.15 ರಷ್ಟು ಇತ್ತು. ಈಗ ಮೀಸಲಾತಿ ಪ್ರಮಾಣ ಶೇ.17ಕ್ಕೆ ಹೆಚ್ಚಳ ಆಗಿದೆ. ಹೀಗಾಗಿ ಶೇ.7 ರಷ್ಟು ಆದರೂ ನೀಡಬೇಕು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ (ಎಂ.ಆರ್.ಎಚ್.ಎಸ್) ವಡಗೇರಾ ತಾಲೂಕ ಅಧ್ಯಕ್ಷ ಹಣಮಂತ ಮಾಲಹಳ್ಳಿ, ಮರಿಲಿಂಗ ವರಟೂರ್, ಸುರೇಶ್ ಹಾಲಗೇರಾ, ಹಣಮಂತ ಓಡಕರ್, ಬೆಂಜ್ ಮೇನ್ ಶಿವನೂರ್, ಕುಮಾರ್ ತುಮಕೂರ್, ಜೀವಲಪ್ಪ ಬೆಂಡೆಬೆಂಬಳಿ, ಸಿದ್ದು ಕಂದಹಳ್ಳಿ, ದೇವು ಕುರಿಹಾಳ ಅವರು ಮನವಿ
ಮಾಡಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!