ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪೊಲೀಸ್ ದೂರುಗಳ ಪ್ರಾಧಿಕಾರದ ಆದೇಶ ತೀರ್ಪುಗಳನ್ನು ಕನ್ನಡದಲ್ಲಿ ಹೊರಡಿಸಿ -ಮೋಹನ್ ಕುಮಾರ್ ದಾನಪ್ಪ

ಬೆಂಗಳೂರು : ರಾಜ್ಯದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯಲೋಪ ಮತ್ತು ಗಂಭೀರ ದುರ್ನಡತೆ, ಅಧಿಕಾರ ದುರ್ಬಳಕೆ ಸೇರಿದಂತೆ ಪೊಲೀಸ್ ದೌರ್ಜನ್ಯ ವಿರುದ್ದ ಸಲ್ಲಿಸುವ ದೂರುಗಳ ಆದೇಶಗಳನ್ನು ಕನ್ನಡದಲ್ಲೇ ಹೊರಡಿಸುವಂತೆ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಅಧ್ಯಕ್ಷರಾದ ಜಸ್ಟೀಸ್ ಎನ್.ಕೆ.ಸುಧೀಂದ್ರ ರಾವ್ ರವರಿಗೆ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರು ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ.

ರಾಜ್ಯದಿಂದ ದೂರುಸಲ್ಲಿಸುವ ದೂರುದಾರರು ಬಹುತೇಕ ಕೆಳ ಮತ್ತು ಮಧ್ಯಮ ವರ್ಗದವರಾಗಿದ್ದು ಬಹುತೇಕ ಜನರು ಪೂರಕ ಶಿಕ್ಷಣ ಪಡೆದವರಾಗಿದ್ದು ಗ್ರಾಮೀಣ ಭಾಗದವರಾಗಿರುತ್ತಾರೆ, ಕೆಲವರು ದೂರು ಬರೆಯಲು ಶಕ್ತರಾದರೆ ಇನ್ನು ಕೆಲವರು ಶಿಕ್ಷಣವಂತರ ಹಾಗೂ ವಕೀಲರ ಸಹಾಯದಿಂದ ದೂರು ಬರೆಯಿಸಿ ಪ್ರಾಧಿಕಾರದಲ್ಲಿ ಸಲ್ಲಿಸುತ್ತಿದ್ದು, ವಿಚಾರಣೆ ಕೈಗೊಂಡ ಸಂದರ್ಭದಲ್ಲಿ ಆಂಗ್ಲ ಭಾಷೆಯಲ್ಲಿ ಆದೇಶ ಘೋಷಣೆ ಮತ್ತು ದೂರಿನ ಅಂತಿಮ ಆದೇಶ/ನಡಾವಳಿಗಳನ್ನು ಆಂಗ್ಲಭಾಷೆಯಲ್ಲಿ ಹೊರಡಿಸುತ್ತಿರುವುದರಿಂದ ದೂರುದಾರರಿಗೆ ಅರ್ಥವಾಗದೇ ನಡಾವಳಿಯಲ್ಲಿನ ವಿಷಯ ತಿಳಿಯಲು ಕಷ್ಟಕರವಾಗಿರುತ್ತದಲ್ಲದೆ ಮತ್ತೊಬ್ಬರನ್ನು ಆಶ್ರಯಿಸಬೇಕಾದ ಅನಿವಾರ್ಯತೆಯಿದ್ದು ಸಾರ್ವಜನಿಕ ಹಿತಾದೃಷ್ಟಿಯಿಂದ ಪ್ರಾಧಿಕಾರದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮದಂತೆ ಪ್ರಸ್ತುತ ಬಾಕಿ ಇರುವ ಎಲ್ಲಾ ಪ್ರಕರಣಗಳ ವಿಚಾರಣೆಯನ್ನು ಆದೇಶ/ತೀರ್ಪುಗಳನ್ನು ಕನ್ನಡದಲ್ಲೇ ಹೊರಡಿಸುಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರು ಒತ್ತಾಯಿಸಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!