ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕುಟುಂಬ ಸಮೇತ ಅಂಜನಾದ್ರಿಗೆ ಭೇಟಿ ನೀಡಿದ ರಾಜ್ಯಪಾಲ ಗೆಹ್ಲೋಟ್

ಕೊಪ್ಪಳ / ಗಂಗಾವತಿ : ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್ ಅವರು ತಮ್ಮ ಕುಟುಂಬ ಸಮೇತ ಗಂಗಾವತಿ ತಾಲೂಕಿನ ಚಿಕ್ಕರಾಂಪೂರದ ಬಳಿ ಇರುವ ಅಂಜನಾದ್ರಿ ದೇಗುಲಕ್ಕೆ ಬುಧವಾರ ಭೇಟಿ ನೀಡಿದರು. ಹನುಮಂತ ದೇವರ ದರ್ಶನ ಪಡೆದ ಅವರು, ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಇದಕ್ಕೂ ಮೊದಲು ಪಾದಗಟ್ಟೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ರಾಜ್ಯಪಾಲರು, ಬಳಿಕ ಅಲ್ಲಿಂದ 575 ಮೆಟ್ಟಿಲುಗಳನ್ನು ಹತ್ತುವ ಮೂಲಕ ಗಮನ ಸೆಳೆದರು. ವಯಸ್ಸು 77 ಆದರೂ ರಾಜ್ಯಪಾಲರು ಹುಮ್ಮಸ್ಸಿನಿಂದಲೇ ತಮ್ಮ ಕುಟುಂಬ ಸದಸ್ಯರೊಂದಿಗೆ ಬೆಟ್ಟ ಹತ್ತಿದರು.

ಬೆಟ್ಟದ ಮೇಲಿನ ದೇಗುಲದಲ್ಲಿ ಪೂಜೆ ಸಲ್ಲಿಸಿ, ಬಳಿಕ ಬೆಟ್ಟದ ಮೇಲಿಂದ ಕಾಣುವ ಹಂಪೆಯ ಸುಂದರ ದೃಶ್ಯ ಹಾಗೂ ಬೆಟ್ಟಗುಡ್ಡಗಳ ಸಾಲಿನಲ್ಲಿ ಹರಿಯುವ ತುಂಗಭದ್ರಾ ನದಿಯನ್ನು ಕಣ್ತುಂಬಿಕೊಂಡರು.

ರಾಜ್ಯಪಾಲರಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೆ ದೇಗುಲದಿಂದ ಶಾಲು ಹೊದಿಸಿ ಗೌರವಿಸಲಾಯಿತು. ರಾಜ್ಯಪಾಲರೊಂದಿಗೆ ಅವರ ಪತ್ನಿ, ಮಕ್ಕಳು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಒಟ್ಟು 40 ಸದಸ್ಯರು ಇದ್ದರು.

ಜಿಲ್ಲಾಧಿಕಾರಿ ಸುರೇಶ್​ ಹಿಟ್ನಾಳ್, ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ, ಅ.ಪ.ರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ, ಸಹಾಯಕ ಆಯುಕ್ತ ಮಹೇಶ್​ ಮಾಲಗತ್ತಿ, ಅರಸಿದ್ಧಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಎಲ್., ದೇಗುಲದ ಆಡಳಿತಾಧಿಕಾರಿ ಪ್ರಕಾಶ್ ರಾವ್, ತಹಶಿಲ್ದಾರ್ ರವಿ ಅಂಗಡಿ ಸೇರಿದಂತೆ ತಾಲೂಕು ಹಂತದ ಅಧಿಕಾರಿಗಳಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!