ಬಳ್ಳಾರಿ/ ಕಂಪ್ಲಿ : ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಜನರು ಸಾಲು ಹಬ್ಬಗಳ ಆಚರಣೆಯಲ್ಲಿ ಬ್ಯುಸಿಯಾಗುತ್ತಾರೆ. ಶ್ರಾವಣ ಮಾಸದಲ್ಲಿ ಬರುವ ವರಮಹಾಲಕ್ಷ್ಮಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಹಿಂದೂಗಳ ಪ್ರತಿಯೊಂದು ಮನೆಯಲ್ಲೂ ವರಮಹಾಲಕ್ಷ್ಮಿ ಹಬ್ಬ ಆಚರಿಸಲಾಗುತ್ತದೆ. ವರಮಾಹಲಕ್ಷ್ಮಿ ಹಬ್ಬದ ನಿಮಿತ್ತ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರಾಗಿದೆ. ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳ ಖರೀದಿಗಾಗಿ ಗ್ರಾಹಕರು ಕಂಪ್ಲಿ ನಗರದ ಪ್ರಮುಖ ಮಾರುಕಟ್ಟೆಯಲ್ಲಿ ಖರೀದಿ ಜೋರಾಗಿತ್ತು .
ವರಮಹಾಲಕ್ಷ್ಮಿ ಹಬ್ಬ:
ಮಾರುಕಟ್ಟೆಗಳಲ್ಲಿ ಹೂವು, ಹಣ್ಣುಗಳ ಬೆಲೆ ಗಗನಕ್ಕೆ, ಬೆಚ್ಚಿಬಿದ್ದ ಗ್ರಾಹಕ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಮಾರುಕಟ್ಟೆಗಳಲ್ಲಿ ಹಣ್ಣು, ತರಕಾರಿ ಮತ್ತು ಹೂವುಗಳ ಬೆಲೆ ಗಗನಕ್ಕೇರಿದೆ. ಹಬ್ಬದ ಬೇಡಿಕೆಯಿಂದಾಗಿ ಪೂರೈಕೆ ಕಡಿಮೆಯಾಗಿದ್ದು, ಬೆಲೆ ಏರಿಕೆಗೆ ಕಾರಣವಾಗಿದೆ. ಗ್ರಾಹಕರು ಬೆಲೆ ಏರಿಕೆಯಿಂದಾಗಿ ತೊಂದರೆ ಅನುಭವಿಸುತ್ತಿದ್ದಾರೆ. ಬಟಾಣಿ, ಹುರುಳಿಕಾಯಿ, ಆಪಲ್, ದಾಳಿಂಬೆ ಮುಂತಾದ ವಸ್ತುಗಳ ಬೆಲೆಗಳು ತೀವ್ರವಾಗಿ ಏರಿಕೆಯಾಗಿವೆ. ಹೂವುಗಳ ಬೆಲೆಯೂ ಅಧಿಕವಾಗಿದೆ.
ಹೂವು ಖರೀದಿಗೆ ಮುಗಿಬಿದ್ದ ಮಹಿಳೆಯರು
ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆಯಲ್ಲಿ ಮಹಿಳೆಯರು ಹೂವು ಖರೀದಿಗೆ ಮುಗಿಬಿದಿದ್ದಾರೆ. ಹೂವು, ಹಣ್ಣು ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದೆ. ಹೂವು ಹಣ್ಣು ಬೆಲೆ ಏರಿಕೆ ನಡುವೆಯೂ ಖರೀದಿ ಜೋರಾಗಿಯೇ ನಡೆಯುತ್ತಿದೆ. ಎಲ್ಲಾ ಬಗೆಯ ಹೂವಿನ ಬೆಲೆ ಗಗನಕ್ಕೇರಿದೆ. ವರಮಹಾಲಕ್ಷ್ಮಿ ಹಬ್ಬಕ್ಕೆ ಹೂವು ಬೆಳೆದ ರೈತರು ಜಾಕ್ ಪಾಟ್ ಹೊಡೆದಿದ್ದಾರೆ.
ಹಬ್ಬ ಹಿನ್ನೆಲೆಯಲ್ಲಿ ಬೇಡಿಕೆ ಹೆಚ್ಚಾಗಿದ್ದು, ಅಗತ್ಯದಷ್ಟು ವಸ್ತುಗಳ ಪೂರೈಕೆಯಾಗುತ್ತಿಲ್ಲ. ಇದರಿಂದ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಹೂವು, ಹಣ್ಣು ಮತ್ತು ತರಕಾರಿಗಳ ಬೆಲೆ ಏರಿಕೆಯಾಗಿದೆ. ಹೂವು, ಹಣ್ಣುಗಳ ಬೆಲೆಯಲ್ಲಿ ಏರಿಕೆ ಕಂಡು ಗ್ರಾಹಕರು ಅಸಮಾಧಾನ ಹೊರಹಾಕಿದ್ದಾರೆ. ಕಳೆದ ವಾರಕ್ಕಿಂತ ಈ ದರದಲ್ಲಿ ಗಜಗಜಾಂತರ ವ್ಯತ್ಯಾಸವಿದೆ ಎನ್ನುತ್ತಿದ್ದಾರೆ.
ವರದಿ : ಜಿಲಾನಸಾಬ್ ಬಡಿಗೇರ್



















