ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್‌ಗೆ ಆತ್ಮೀಯ ಬೀಳ್ಕೊಡುಗೆ, ಕೆ.ಎನ್ ಹೇಮಂತ್‌ ಕುಮಾರ್ ಗೆ ಸ್ವಾಗತ

ಶಿವಮೊಗ್ಗ/ ಭದ್ರಾವತಿ: ನಗರಸಭೆ ಪೌರಾಯುಕ್ತರಾಗಿ ಒಂದು ವರ್ಷ ಎಂಟು ತಿಂಗಳು ಕರ್ತವ್ಯ ನಿರ್ವಹಿಸಿ ಮುಂಬಡ್ತಿ ಹೊಂದಿ ಶಿರಸಿ ನಗರಸಭೆಗೆ ವರ್ಗಾವಣೆಗೊಂಡಿರುವ ಪ್ರಕಾಶ್ ಎಂ. ಚನ್ನಪ್ಪನವರ್ ರವರಿಗೆ ಬೀಳ್ಕೊಡುಗೆ ಹಾಗೂ ನೂತನ ಪೌರಾಯುಕ್ತರಾಗಿ ಆಗಮಿಸಿರುವ ಕೆ. ಎನ್. ಹೇಮಂತ್‌ರವರಿಗೆ ಸ್ವಾಗತಿಸಿ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ವತಿಯಿಂದ ಗುರುವಾರ ಸನ್ಮಾನಿಸಿ ಗೌರವಿಸಲಾಯಿತು.

ನಗರಸಭೆಯ ಸರ್ ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವರ್ಗಾವಣೆಗೊಂಡ ಪ್ರಕಾಶ್ ಎಂ. ಚನ್ನಪ್ಪನವರ್ ಕರ್ತವ್ಯ ಕುರಿತು ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್, ಮಾಜಿ ಅಧ್ಯಕ್ಷರು ಹಾಲಿ ಸದಸ್ಯರುಗಳಾದ ಬಿ.ಕೆ ಮೋಹನ್, ಬಿ. ಟಿ. ನಾಗರಾಜ್, ಅನುಸುಧಾ ಮೋಹನ್ ಪಳನಿ, ಶೃತಿ ವಸಂತಕುಮಾರ್, ಮಾಜಿ ಉಪಾಧ್ಯಕ್ಷರು ಹಾಗೂ ಹಾಲಿ ಸದಸ್ಯರುಗಳಾದ ವಿ.ಕದಿರೇಶ್, ಚನ್ನಪ್ಪ, ಸದಸ್ಯರುಗಳಾದ ಟಿಪ್ಪುಸುಲ್ತಾನ್, ಬಸವರಾಜ್ ಬಿ. ಆನೇಕೊಪ್ಪ, ಆರ್ ಮೋಹನ್ ಕುಮಾರ್, ಪಲ್ಲವಿ ದಿಲೀಪ್ ಸೇರಿದಂತೆ ಹಲವು ಸದಸ್ಯರು, ವಿವಿಧ ಸಂಘಟನೆಗಳ ಮುಖಂಡರಾದ ಸತ್ಯ ಭದ್ರಾವತಿ, ಚಿನ್ನಯ್ಯ, ಬಿ.ಎನ್ ರಾಜು, ಬಿ.ಎಸ್ ನಾರಾಯಣಪ್ಪ, ತೀರ್ಥೇಶ್, ನಗರಸಭೆ ಸಮುದಾಯ ಸಂಘಟನಾಧಿಕಾರಿ ಎಂ. ಸುಹಾಸಿನಿ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸೇರಿದಂತೆ ಪ್ರಮುಖರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಸರಳತೆ, ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿ ತಮ್ಮ ನಗುಮುಖದಿಂದಲೆ ಎಲ್ಲರನ್ನು ಸಮಾಧಾನಪಡಿಸುವ ಮೂಲಕ ಉತ್ತಮ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕದಲ್ಲಿ ಪ್ರತಿಷ್ಠಿತ 3 ಕ್ಷೇತ್ರಗಳಾದ ಹೊಸಕೋಟೆ, ನಾಗಮಂಗಲ ಮತ್ತು ಭದ್ರಾವತಿ ಕ್ಷೇತ್ರಗಳಲ್ಲಿ ಯಾವ ಅಧಿಕಾರಿಗಳು ಕರ್ತವ್ಯ ನಿರ್ವಹಿಸಿ ಉತ್ತಮ ಹೆಸರು ಗಳಿಸುತ್ತಾರೋ ಅಂತಹ ಅಧಿಕಾರಿಗಳು ಯಾವ ಕ್ಷೇತ್ರಗಳಲ್ಲಾದರೂ ಉತ್ತಮ ಕೆಲಸ ಮಾಡಬಹುದು. ಇಂತಹ ಭದ್ರಾವತಿ ವಿಧಾನಸಭಾ ಕ್ಷೇತ್ರದ ಭದ್ರಾವತಿ ನಗರಸಭೆಯಲ್ಲಿ ಪೌರಾಯುಕ್ತರಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಎಲ್ಲರ ಮನಗೆದ್ದಿರುವ ಪ್ರಕಾಶ್ ಎಂ. ಚನ್ನಪ್ಪನವರ್ ಅವರಿಗೆ ಇನ್ನಷ್ಟು ಕೀರ್ತಿ ಹೆಚ್ಚಲಿ ಎಂದು ಶುಭ ಹಾರೈಸಿದರು.

ಬೀಳ್ಕೊಡುಗೆ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಪ್ರಕಾಶ್ ಎಂ. ಚನ್ನಪ್ಪನವರ್, ವೃತ್ತಿ ಬದುಕಿನಲ್ಲಿ ಹಲವಾರು ರೀತಿಯ ಅನುಭವಗಳನ್ನು ಕಂಡಿದ್ದೇನೆ. ವಿಶೇಷವಾಗಿ ಭದ್ರಾವತಿ ನಗರಸಭೆಯಲ್ಲಿ ಲಭಿಸಿದ ಉತ್ತಮ ಸಹಕಾರ ಎಂದಿಗೂ ಮರೆಯಲು ಸಾಧ್ಯವಿಲ್ಲ. ಅಧಿಕಾರಿಗಳು ಉತ್ತಮವಾಗಿ ಕರ್ತವ್ಯ ನಿರ್ವಹಿಸಲು ಪ್ರತಿಯೊಬ್ಬರ ಸಹಕಾರ ಅಗತ್ಯ.

ಕೆ ಆರ್ ಐ ಡಿ ಎಲ್ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅವರ ಮಾರ್ಗದರ್ಶನದಂತೆ ಹಿರಿಯ ಸದಸ್ಯರಾದ ಬಿ.ಕೆ ಮೋಹನ್ ರವರ ಸಲಹೆ ಹಾಗೂ ನಗರಸಭೆ ಸಹೋದ್ಯೋಗಿಗಳು, ಸಿಬ್ಬಂದಿ ವರ್ಗದವರು, ಪೌರಕಾರ್ಮಿಕರು, ನಗರಸಭೆ ಚುನಾಯಿತ ಹಾಗೂ ನಾಮನಿರ್ದೇಶಿತ ಎಲ್ಲಾ 40 ಸದಸ್ಯರು, ವಿವಿಧ ಸಂಘ-ಸಂಸ್ಥೆಗಳು, ವಿವಿಧ ಸರ್ಕಾರಿ ಇಲಾಖೆ ಅಧಿಕಾರಿಗಳ ಸಹಕಾರದಿಂದ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಸರ್ವರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ನಗರಸಭೆಯ ಉಪಾಧ್ಯಕ್ಷ ಮಣಿ, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಗೋಪಾಲ್ (ಗೋಪಿ), ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಜಿಲ್ಲಾಧ್ಯಕ್ಷ ಡಿ.ಎಸ್ ಹೇಮಂತ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್. ನರಸಿಂಹಮೂರ್ತಿ, ತಾಲ್ಲೂಕು ಅಧ್ಯಕ್ಷ ಎಸ್. ಚೇತನ್ ಕುಮಾರ್, ಪ್ರಧಾನ ಕಾರ್ಯದರ್ಶಿ ಸಿ. ರವಿಪ್ರಸಾದ್, ಉಪಾಧ್ಯಕ್ಷ ಎಸ್. ಪವನ್ ಕುಮಾರ್, ನಗರಸಭೆ ವ್ಯವಸ್ಥಾಪಕಿ ಸುನಿತಾಕುಮಾರಿ, ಪರಿಸರ ಅಭಿಯಂತರ ಎಂ.ಪ್ರಭಾಕರ್, ಕಂದಾಯ ಅಧಿಕಾರಿ ರಮೇಶ್, ಮಹಮ್ಮದ್ ಗೌಸ್, ನಗರಸಭೆಯ ಚುನಾಯಿತ ಹಾಗೂ ನಾಮನಿರ್ದೇಶಿತ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಪೌರಕಾರ್ಮಿಕರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.

ವರದಿ ಕೆ. ಆರ್. ಶಂಕರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!