ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪ್ರತಿ ಮನೆಗೂ ನೀರು ಪೂರೈಕೆ ಮಾಡುವುದು ಸಚಿವರ ಗುರಿಯಿದೆ; ಚವ್ಹಾಣ

ಕಲಬುರಗಿ/ಚಿತ್ತಾಪುರ; ಪಟ್ಟಣದ ಪ್ರತಿ ಮನೆಗೂ ನೀರು ಪೂರೈಕೆ ಮಾಡುವುದು ಸಚಿವ ಪ್ರಿಯಾಂಕ್ ಖರ್ಗೆ ಅವರ ಗುರಿಯಿದೆ ಎಂದು ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗದೀಶ್ ಚವ್ಹಾಣ ಹೇಳಿದರು.
ಪಟ್ಟಣದ ಸ್ಟೇಷನ್ ತಾಂಡಾದಲ್ಲಿ ಸುಧಾರಿತ ಕುಡಿಯುವ ನೀರು ಸರಬರಾಜು ಅಮೃತ್ ಜಲ್ 2.0 ಯೋಜನೆ ಅಡಿಯಲ್ಲಿ ಈಚೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಈ ಕಾಮಗಾರಿಗೆ ತಾಂಡಾದ ಹಿರಿಯರಾದ ಪೋಮು ಪಾಂಡು ಚವ್ಹಾಣ, ಯಶೋಧ ಗೋವಿಂದ ನಾಯಕ್ ಅವರು ಭೂಮಿ ಪೂಜೆ ನೆರವೇರಿಸಿದರು.
ಸುಮಾರು 45 ಕೋಟಿ ರೂ. ವೆಚ್ಚದಲ್ಲಿ ಪಟ್ಟಣದ ಪ್ರತಿಯೊಂದು ವಾರ್ಡಿನಲ್ಲಿ ಮನೆ ಮನೆಗೂ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಒಂದು ನಳ ಕೊಡುವ ಗುರಿಯನ್ನು ಸಚಿವರು ಹೊಂದಿದ್ದಾರೆ ಎಂದು ತಿಳಿಸಿದರು.
ಮುಖಂಡರಾದ ಕಿಶನ್ ನಾಯಕ, ಪೋಮು ಚವ್ಹಾಣ, ದೇವಿದಾಸ್ ನಾಯಕ, ಭೀಮಸಿಂಗ್ ಚವ್ಹಾಣ, ಪೋಮು ಚವ್ಹಾಣ, ಠಾಕ್ರು ಪವಾರ, ದೇವಿದಾಸ್ ಚವ್ಹಾಣ, ತಾರಾನಾಥ್ ಚವ್ಹಾಣ, ರಾಮು ರಾಠೋಡ, ಅಂಬಾದಾಸ್ ಚವ್ಹಾಣ, ಮಹೇಶ್ ಪವಾರ, ಅನಿಲ್‌ ಚವ್ಹಾಣ, ಈಶ್ವರ್ ರಾಠೋಡ, ದತ್ತು ಪವಾರ, ಜಗದೀಶ್ ಪವಾರ, ಸಂತೋಷ್ ಚವ್ಹಾಣ, ಸಂತೋಷ್ ರಾಠೋಡ, ಸುನೀಲ್ ಪವಾರ, ರಾಮ ರಾಠೋಡ ಸೇರಿದಂತೆ ಇತರರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!