ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಆ.11ರಂದು ವಿಶ್ವ ಆದಿವಾಸಿ ದಿನಾಚರಣೆ ಆಚರಿಸಲಾಗುವುದು : ಹೆಚ್.ಪಿ.ಶಿಕಾರಿ ರಾಮು

ಬಳ್ಳಾರಿ / ಕಂಪ್ಲಿ: ಮೂಲ ಆದಿವಾಸಿ ಬುಡಕಟ್ಟುಗಳ ಬಹು ಬೇಡಿಕೆಗಳನ್ನು ಈಡೇಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಬೇಕೆಂಬ ಹಿನ್ನಲೆ ಸಮಸ್ಯೆಗಳನ್ನು ಈಡೇರಿಸಬೇಕೆಂದು ಪಟ್ಟಣದ ತಹಶೀಲ್ದಾರ್ ಕಛೇರಿಯಲ್ಲಿ ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ತುವತಿಯಿಂದ ಆ.11ರಂದು ಮನವಿ ಪತ್ರ ಸಲ್ಲಿಸುವ ಮೂಲಕ ವಿಶ್ವ ಆದಿವಾಸಿ ದಿನಾಚರಣೆ ಆಚರಿಸಲಾಗುವುದು ಎಂದು ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ತಿನ ರಾಜ್ಯ ಸಂಘಟನಾ ಕಾರ್ಯದರ್ಶಿ ಹೆಚ್.ಪಿ.ಶಿಕಾರಿ ರಾಮು ತಿಳಿಸಿದ್ದಾರೆ.
ಅವರು ಶುಕ್ರವಾರ ಪಟ್ಟಣದಲ್ಲಿ ಪತ್ರಿಕಾ ಪ್ರಕಟಣೆ ನೀಡಿ ಮಾತನಾಡಿ, 31ನೇ ವಿಶ್ವ ಆದಿವಾಸಿ ದಿನಾಚರಣೆಯನ್ನು ವಿಶ್ವಸಂಸ್ಥೆ ಎಲ್ಲಾ ತಮ್ಮ ಸಮುದಾಯಗಳನ್ನು ಸಬಲೀಕರಣಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ಅಂತರಾಷ್ಟ್ರೀಯ ಸ್ಥಳೀಯ ಜನರ ನಿಲುವು ಅಶೋತ್ತರಗಳನ್ನು ಮತ್ತು ಆದಿವಾಸಿ ಜನರ ಎಲ್ಲಾ ಹಕ್ಕುಗಳನ್ನು ರಕ್ಷಿಸುವ ಭವಿಷ್ಯ ರೂಪಿಸುವದಾಗಿದೆ. ಆದಿವಾಸಿ ದಿನಾಚರಣೆಯನ್ನು ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲೂಕುಗಳ ಮೂಲಕ ಸಿಎಂಗೆ ಮನವಿ ಪತ್ರ ರವಾನಿಸಲಾಗುತ್ತದೆ. ರಾಜ್ಯದ 49 ಆದಿವಾಸಿ ಬುಡಕಟ್ಟುಗಳ ಬೇಡಿಕೆಗಳ ಮನವಿ ಪತ್ರವನ್ನು ನೀಡುವುದರ ಮುಖಾಂತರ ಸರ್ಕಾರ ಆದಿವಾಸಿ ಬೇಡಿಕೆಗಳನ್ನು ಈಡೀರಿಸುವ ದಿಕ್ಕಿನಲ್ಲಿ ಸರ್ಕಾರಕ್ಕೆ ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ತ ಮುಖಾಂತರ ಒತ್ತಾಯಿಸಲಾಗುತ್ತಿದೆ. ಪ್ರತಿ ವರ್ಷದಲ್ಲಿ ಆಗಸ್ಟ್ 9ರಂದು ವಿಶ್ವ ಆದಿವಾಸಿ ದಿನಾಚರಣೆ ಮಾಡಿಕೊಂಡು ಬರಲಾಗಿದೆ. ಆದರೆ, ಈ ಸಲ ಆಗಸ್ಟ್ 9 ರಂದು ಎರಡನೇ ಶನಿವಾರದ ರಜೆ ಇರುವುದರಿಂದ ಇದರ ಬದಲಾಗಿ ಆಗಸ್ಟ್ 11 ರಂದು ಕಂಪ್ಲಿ ತಾಲೂಕಿನಲ್ಲಿರುವ ದಂಡಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸುವ ಮೂಲಕ ದಿನಾಚರಣೆ ಆಚರಿಸಲಾಗುವುದು. ಮೂಲ ಆದಿವಾಸಿ ಬುಡಕಟ್ಟು ಸಮುದಾಯದವರು ಭಾಗವಹಿಸಿ ವಿಶ್ವ ಆದಿವಾಸಿ ದಿನಾಚರಣೆಯನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!