ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀ ಗುರುರಾಘವೇಂದ್ರ ತೀರ್ಥ ಗುರುಸಾರ್ವಭೌಮರ 354ನೇ ಆರಾಧನಾ ಮಹೋತ್ಸವ

ಬಳ್ಳಾರಿ / ಕಂಪ್ಲಿ : ಪಟ್ಟಣದ ಎಸ್‌. ಎನ್‌. ಪೇಟೆಯ ಜಗದ್ಗುರು ಶ್ರೀಮನ್ ಮದ್ವಾಚಾರ್ಯರ ಮೂಲ ಮಹಾಸಂಸ್ಥಾನದ ನಂಜನಗೂರು ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ 354ನೇ ಆರಾಧನಾ ಮಹೋತ್ಸವದ ಅಂಗವಾಗಿ ಭಾನುವಾರದಂದು ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾ ಭಕ್ತಿಯಿಂದ ಜರುಗಿದವು.
ಇಲ್ಲಿನ ದೇವಸ್ಥಾನದ ಸನ್ನಿಧಾನದಲ್ಲಿ ಬೆಳಿಗ್ಗೆ ಅಷ್ಟೋತ್ತರ ಸಹಿತ ಫಲ ಪಂಚಾಮೃತ, ಪುಷ್ಪಾಲಂಕಾರ, ಕನಕಾಭಿಷೇಕ, ಮಧ್ಯಾಹ್ನದ ಹಸ್ತೋದಕ, ಮಹಾಮಂಗಳಾರತಿ ನೆರವೇರಿದವು. ಇಲ್ಲಿನ ಆರಾಧನಾ ಮಹೋತ್ಸವ ಅಂಗವಾಗಿ ಭಕ್ತರು ಆಗಮಿಸಿ, ದರ್ಶನ ಪಡೆದುಕೊಂಡರು. ನಂತರ ಶ್ರೀಗುರುರಾಜ ಸೇವಾ ಮಂಡಳಿ ಹಾಗೂ ಮಹಿಳಾ ಭಜನಾ ಮಂಡಳಿಯವರಿಂದ ತೀರ್ಥ ಪ್ರಸಾದ ವ್ಯವಸ್ಥೆ ಮಾಡಿದದರು. ಭಕ್ತರು ಫಲ-ಮಂತ್ರಾಕ್ಷತೆಯನ್ನು ಸ್ವೀಕರಿಸಿದರು. ಸಂಜೆ ರಥೋತ್ಸವ, ಸ್ವಸ್ತಿವಾಚನ, ತೊಟ್ಟಲು ಸೇವಾ, ಮಹಾಮಂಗಳಾರತಿ ನೆರವೇರಿದವು.
ಈ ಸಂದರ್ಭದಲ್ಲಿ ಶ್ರೀಗುರುರಾಜ ಸೇವಾ ಮಂಡಳಿ ಹಾಗೂ ಮಹಿಳಾ ಭಜನಾ ಮಂಡಳಿಯವರು ಸೇರಿದಂತೆ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಯ ಸದ್ಭಕ್ತರು ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!