ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದೂರುದಾರರಿಂದ ಲಂಚದ ಬೇಡಿಕೆ ಆನ್ಲೈನ್ ಮೂಲಕ ಹಣ ಸ್ವೀಕರಿಸಿದ್ದ ಇಬ್ಬರು ಪೊಲೀಸರ ಅಮಾನತು

ದೂರುದಾರರಿಂದ ಹಣ ಸ್ವೀಕರಿಸಿದ ಆರೋಪಕ್ಕೆ ಸಂಬಂಧಿಸಿದಂತೆಯೇ ಇಬ್ಬರು ಪೊಲೀಸ್‌ರನ್ನು ಎಸ್ ಪಿ ಪ್ರಥ್ವಿಕ್ ಶಂಕರ್ ಅವರು ಸೇವೆಯಿಂದ ಅಮಾನತು ಗೊಳಿಸಿದ ಪ್ರಕರಣ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಜರುಗಿದೆ.

ಪೊಲೀಸ್ ಪೇದೆಗಳಾದ ವಿಶ್ವನಾಥರಡ್ಡಿ ಮತ್ತು ಗೋಪಾಲರೆಡ್ಡಿ ಎಂಬುವವರೇ ಅಮಾನತುಗೊಂಡಿದ್ದಾರೆ.

ಗುರುಮಠಕಲ್: ಜುಲೈ ತಿಂಗಳ 24 ರಂದು ಠಾಣಾ ವ್ಯಾಪ್ತಿಯ ಮಿನಾಸಪುರ ಗ್ರಾಮದ ವೆಂಕಟರೆಡ್ಡಿ ಮತ್ತು ಅವರ ಮಗ ಹಣಮಂತರಡ್ಡಿ ಎಂಬುವವರ ಮೇಲೆ ಯಾದಯ್ಯ ಯಾದವ್, ಮಲ್ಲಯ್ಯ ಯಾದವ್ ಮತ್ತು ಗೋಪಿ ಯಾದವ್ ಎಂಬುವವರು ಸೇರಿದಂತೆಯೇ ಐವರು ಮಾರಣಾಂತಿಕ ಹೊಡೆದು ಕೈ,ಕಾಲು ಮುರಿದಿದ್ದಾರೆ ಮತ್ತು ಜೀವ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾರೆಂದು ಅನುಸೂಯಾ ವೆಂಟಕರಡ್ಡಿ ಎಂಬುವವರು ದೂರು ನೀಡಿದ್ದರು.

ಆರೋಪಿಗಳನ್ನು ಕುರಿತು ಬಂಧಿಸುವ ವಿಚಾರಿಸಿದಾಗ ಅವರನ್ನು ಬಂಧಿಸಬೇಕಾದರೆ ಒಂದು ಲಕ್ಷ ರೂ. ನೀಡಬೇಕೆಂಬ ಲಂಚದ ಬೇಡಿಕೆಯನ್ನು ಈ ಇಬ್ಬರು ಪೊಲೀಸರು ಇಟ್ಟಿದ್ದರು, ವಿಶ್ವನಾಥರಡ್ಡಿ ಎಂಬುವವರ ಮೊಬೈಲ್‌ಗೆ ಆಗ 10 ಸಾವಿರ ರೂ. ಹಾಗೂ ರಾಜೇಂದ್ರಬಾಬು ಎಂಬುವವರ ನಂಬರ್‌ಗೆ ಹತ್ತು ಸಾವಿರ ರೂ. ಪೊನ್ ಪೇ ಮಾಡಿದ್ದರ ಬಗ್ಗೆ ಎಸ್ ಪಿ ಅವರಿಗೆ ಸಲ್ಲಿಸಿದ್ದ ದೂರಿನಲ್ಲಿ ಅನುಸೂಯ ಎಂಬುವವರು ವಿವರಿಸಿದರು.

ಈ ದೂರಿನ್ವಯ ತನಿಖೆಗೆ ಆದೇಶಿಸಿದಾಗ ಇದನ್ನು ತನಿಖೆ ಮಾಡಿದ ಡಿವೈಎಸ್ ಪಿ ನಾಗರಾಜ ಅವರು ನೀಡಿದ ವರದಿ ಆಧಾರದ ಮೇಲೆ ಈ ಇಬ್ಬರನ್ನು ಎಸ್ ಪಿ ಅವರು ಸೇವೆಯಿಂದ ಅಮಾನತುಗೊಳಿಸಿದ್ದಾರೆ.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!