ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕಂಪ್ಲಿಯ ಮಂಗಳಮುಖಿ ರಾಜಮ್ಮಗೆ ಅಭಿನಂದನೆ!

ಬಳ್ಳಾರಿ / ಕಂಪ್ಲಿ: ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಸುಗ್ಗೇನಹಳ್ಳಿ ಗ್ರಾಮದ ನಿವಾಸಿ ಮಂಗಳ ಮುಖಿ ಪಿ.ರಾಜಮ್ಮರವರು ಭೀಕ್ಷೆ ಬೇಡಿದ ಉಳಿತಾಯದ ಹಣದಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಟಿ-ಶರ್ಟ್, ಪ್ಯಾಂಟ್‌, ಬಟ್ಟೆಗಳನ್ನು ಕೊಡುಗೆಯಾಗಿ ನೀಡಿದ ಪರೋಪಕಾರಿ ಕಾರ್ಯವನ್ನು ಮೆಚ್ಚಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಪತ್ರದ ಮೂಲಕ ಅಭಿನಂದಿಸಿದ್ದಾರೆ.

ಸದರಿ ರಾಜಮ್ಮನವರ ಸಮಾಜ ಮುಖಿ ಕಾರ್ಯವನ್ನು ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರು ಮುಖ್ಯಮಂತ್ರಿ ಸಿದ್ದರಾಮಯ್ಯರವರ ಗಮನಕ್ಕೆ ತಂದಿದ್ದರು!

ಮುಖ್ಯಮಂತ್ರಿ ಸಿದ್ದರಾಮಯ್ಯರವರ ಅಭಿನಂದನಾ ಪತ್ರದಲ್ಲಿ…

ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲ್ಲೂಕಿನ ಸುಗ್ಗೇನಹಳ್ಳಿ ಗ್ರಾಮದ ನಿವಾಸಿ ಶ್ರೀ ಪಿ.ರಾಜಮ್ಮ ಅವರ ಸಾಮಾಜಿಕ ಕಳಕಳಿ ಅನನ್ಯವಾದುದು, ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರು ಎದುರಿಸುವ ಸವಾಲುಗಳು ಮತ್ತು ಹೋರಾಟದ ಬದುಕಿನ ನಡುವೆಯೂ ತಮ್ಮ ಸಮಾಜ ಸೇವೆ ಆದರ್ಶಪ್ರಾಯವಾಗಿದೆ, ಬಡತನದ ಕಾರಣದಿಂದ ಶಾಲೆಗೆ ಹೋಗಲು ಸಾಧ್ಯವಾಗದೇ ಶಿಕ್ಷಣದಿಂದ ವಂಚಿತರಾಗಿದ್ದ ರಾಜಮ್ಮನವರು ಮಕ್ಕಳಿಗೆ, ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಸಮವಸ್ತ್ರ, ಬಟ್ಟೆ, ಪುಸ್ತಕ ಹಾಗೂ ಲೇಖನ ಸಾಮಗ್ರಿಗಳನ್ನು ನೀಡುತ್ತಿರುವ ತಮ್ಮ ಉದಾತ್ತ ಚಿಂತನೆ ಶ್ಲಾಘನೀಯವಾದುದು.

ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರುವ ಪಿ. ರಾಜಮ್ಮ ಅವರ ನಿಸ್ವಾರ್ಥ ಸೇವೆ ಸಮಾಜಕ್ಕೆ ಮಾದರಿಯಾಗಿದೆ. ರಾಜಮ್ಮನವರ ಸಮಾಜಮುಖಿ ಕಾರ್ಯಕ್ಕೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆoದು ತಿಳಿಸಿರುತ್ತಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!