ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕು ಪಂಚೆಹೊಸಹಳ್ಳಿ ಎಮ್ಮೆದೊಡ್ಡಿ ವಲಯ ಮಟ್ಟದ ಕ್ರೀಡಾಕೂಟವನ್ನು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಿಗಣಿಹಳ್ಳಿ ನೀಲಕಂಠಪ್ಪ ಉದ್ಘಾಟಿಸಿ ಮಾತನಾಡಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡಾಕೂಟಗಳು ಸಹಕಾರಿಯಾಗಲಿವೆ, ಶಿಕ್ಷಣದ ಜೊತೆಗೆ ಕ್ರೀಡೆಯೂ ಮುಖ್ಯ, ಮಕ್ಕಳು ಮೊಬೈಲ್ ಗೀಳಿನಿoದ ಹೊರಬಂದು ಗ್ರಾಮೀಣ ಆಟಗಳಲ್ಲಿ ತೊಡಗಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಸರ್ಕಾರ ಮಕ್ಕಳಿಗೆ ಉತ್ತೇಜನ ನೀಡಲು ರಾಜ್ಯಮಟ್ಟದವರೆಗೂ ಕ್ರೀಡಾಕೂಟಗಳನ್ನು ಆಯೋಜಿಸುತ್ತಿದೆ ಎಂದರು. ಎಮ್ಮೆದೊಡ್ಡಿ, ಕೆ ಹೊಸಳ್ಳಿ ಪಟ್ಟಣಗೆರೆ ಕ್ಲಸ್ಟರ್ ವ್ಯಾಪ್ತಿಯ 15 ಶಾಲೆಗಳ ಮಕ್ಕಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಗ್ರಾಮದ ಹಿರಿಯ ಹನುಮಂತಪ್ಪ, ಎಸ್ ಡಿ ಎಮ್ ಸಿ ಅಧ್ಯಕ್ಷ ನಾಗರಾಜು, ಗೌಡರಾದ ಮಂಜಪ್ಪ, ಚಂದ್ರಪ್ಪ, ರವಿ, ಅಜ್ಜಯ್ಯ ಗ್ರಾಮ ಪಂಚಾಯಿತಿ ಸದಸ್ಯರಾದ ಪರಮೇಶ್ವರಪ್ಪ, ಶಿವರುದ್ರಪ್ಪ, ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಜಗದೀಶ್, ಮುಖ್ಯ ಶಿಕ್ಷಕರಾದ ರಾಜಪ್ಪ, ನವೀನ್, ಬಸಪ್ಪ ,ಮೈಲಾರಪ್ಪ ಸೇರಿದಂತೆ ಇತರರಿದ್ದರು.
ವರದಿ ಮಲ್ಲಿದೇವಿಹಳ್ಳಿ ಶ್ರೀನಿವಾಸ್



















