ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಿಂದುಳಿದ ವರ್ಗದ ಮೂವರಿಗೆ ಸಚಿವ ಸ್ಥಾನ ನೀಡುವಂತೆ ಮಣ್ಣೂರು ನಾಗರಾಜ ಒತ್ತಾಯ

ಬಳ್ಳಾರಿ / ಕಂಪ್ಲಿ : ಕರ್ನಾಟಕದಲ್ಲಿರುವ ಪ್ರವರ್ಗ-1 ಜಾತಿಯವರಲ್ಲಿ ಮೂರು ಜನಕ್ಕೆ ಮುಂದಿನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಕರ್ನಾಟಕ ರಾಜ್ಯ ಪ್ರವರ್ಗ-1 (ಹಿಂದುಳಿದ ವರ್ಗ) ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಮಣ್ಣೂರು ನಾಗರಾಜ ಒತ್ತಾಯಿಸಿದರು.
ಅವರು ಪಟ್ಟಣದಲ್ಲಿ ಸೋಮವಾರ ಪತ್ರಿಕಾ ಪ್ರಕಟಣೆ ನೀಡಿ ಮಾತನಾಡಿ, ಹಿಂದುಳಿದ ವರ್ಗದವರಿಗೆ ನಿರೀಕ್ಷಿತ ಸ್ಥಾನ ನೀಡಿಲ್ಲ. ಇದರಿಂದ ಪ್ರವರ್ಗ-1 ಸಂಪೂರ್ಣವಾಗಿ ಹಿಂದುಳಿಯುವಂತಾಗಿದೆ. 2015 ರ ಜಾತಿಗಣತಿ ಪ್ರಕಾರ ಕರ್ನಾಟಕ ರಾಜ್ಯದ 8.1% ಜನಸಂಖ್ಯೆಯನ್ನು ಹೊಂದಿರುವ ಪ್ರವರ್ಗ-1 ಜಾತಿಯವರಿಗೆ ಜನಸಂಖ್ಯೆಯ ಅನ್ವಯ ಸಚಿವ ಸ್ಥಾನ ನೀಡಬೇಕು. ಇದರಲ್ಲಿ ಗೊಲ್ಲರ (ಯಾದವ) ಸಮುದಾಯದ ಎಂಎಲ್ ಸಿ ಶ್ರೀನಿವಾಸ್, ಗಂಗಾಮತಸ್ಥ ಸಮುದಾಯದ ಎಂಎಲ್ ಸಿ ತಿಪ್ಪಣ್ಣ ಕಮಾಕನೂರು ಮತ್ತು ಉಪ್ಪಾರ ಸಮುದಾಯದ ಮೂರು ಭಾರಿ ಶಾಸಕರಾದ ಪುಟ್ಟರಂಗಶೆಟ್ಟಿ ಇವರಿಗೆ
ಕರ್ನಾಟಕ ಕಾಂಗ್ರೆಸ್ ಸರ್ಕಾರವು ಸಚಿವರಾನ್ನಾಗಿ ಮಾಡಬೇಕೆಂದು ಆಗ್ರಹಿಸುವ ಜೊತೆಗೆ ಈ ನಿಟ್ಟಿನಲ್ಲಿ ಹಿಂದುಳಿದ ಸಂಘಟನೆಗಳು ಸ್ಥಳಿಯ ಕಾಂಗ್ರೆಸ್ ಘಟಕಗಳ ಮೇಲೆ ಒತ್ತಡ ಹಾಕಬೇಕಾಗಿದೆ ಹಿಂದುಳಿದ ವರ್ಗದವರು ಹೋರಾಟ ಮಾಡುವ ಮೂಲಕ ಹಕ್ಕನ್ನು ಪಡೆದುಕೊಳ್ಳಬೇಕಾಗಿದೆ ಎಂದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!