ಯಾದಗಿರಿ/ ಗುರುಮಠಕಲ್: ಗುರುಮಠಕಲ್ ಮತಕ್ಷೇತ್ರದ ವ್ಯಾಪ್ತಿಯ ಸೈದಾಪುರ ಬಸ್ ನಿಲ್ದಾಣದಲ್ಲಿ ಬಸ್ ವ್ಯವಸ್ಥಾಪಕರು ನಿಗದಿತ ಸಮಯಕ್ಕೆ ಬಸ್ಸುಗಳನ್ನು ಹಳ್ಳಿಗಳ ಕಡೆ ಕಳುಹಿಸದೇ, ಶಾಲಾ ಮಕ್ಕಳಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆ ಉಂಟುಮಾಡುತ್ತಿರುವ ಘಟನೆಗೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಕೆ. ಕೆ. ಆರ್. ಟಿ. ಸಿ. ಬಸ್ ಚಾಲಕರು ಮತ್ತು ನಿರ್ವಾಹಕರು ಶಾಲಾ ಮಕ್ಕಳಿಗೆ ನಿಂದನೆ ಮಾಡುವ ಮೂಲಕ ದೌರ್ಜನ್ಯ ನಡೆಸುತ್ತಿರುವುದನ್ನು ಸಾರ್ವಜನಿಕರು ಖಂಡಿಸಿದರು.
ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ಮತ್ತು ಸಾರ್ವಜನಿಕ ಹಿತಾಸಕ್ತಿಯನ್ನು ಕಾಪಾಡುವಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಬಸ್ ಸಂಚಾರದಲ್ಲಿ ಶಿಸ್ತು ಹಾಗೂ ಸಮಯಪಾಲನೆ ಖಚಿತಪಡಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಬಸ್ ನಿಲ್ದಾಣವನ್ನು ಸಂಪೂರ್ಣ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಲಾಗಿದೆ.
ವರದಿ: ಜಗದೀಶ್ ಕುಮಾರ್ ಭೂಮಾ



















