ಗದಗ ಜಿಲ್ಲೆ ರೋಣ ತಾಲೂಕು ಕುರುಡಗಿ ಗ್ರಾಮ ಪಂಚಾಯಿತಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಧ್ವಜಾರೋಹಣ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀ ಶಿವನಗೌಡ ಸಿದ್ದನಗೌಡ ನೆರವೇರಿಸಿದರು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಗದಗ ಜಿಲ್ಲಾ ಯೂತ್ ಕಾಂಗ್ರೆಸ್ ಉಪಾಧ್ಯಕ್ಷರು ಶ್ರೀಯುತ ಎಸ್ ಬಿ ಗವಾರಿ ಹಾಗೂ ಗ್ರಾಮದ ಹಿರಿಯರು ಯುವಕರು ಶಾಲಾ ಮುಖ್ಯೋಪಾಧ್ಯಾಯನಯರು ಶಿಕ್ಷಕರು ವಿದ್ಯಾರ್ಥಿಗಳು ಮತ್ತು ಗ್ರಾಮ ಪಂಚಾಯತಿಯ ಸಿಬ್ಬಂದಿಗಳು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಶಿಲ್ಪಾ ಕವಲೂರ್ ಭಾಗಿಯಾಗಿ ಗ್ರಾಮ ಪಂಚಾಯತಿಯ ಇಬ್ಬರು ಸ್ವಚ್ಛತಾ ಸಿಬ್ಬಂದಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಸದಸ್ಯರು ಹಮ್ಮಿಕೊಂಡಿದ್ದರು. ಗ್ರಾಮದ ಎಲ್ಲರೂ ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಸಿಹಿ ಹಂಚಿದರು.
- ಕರುನಾಡ ಕಂದ




















