ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀಕೃಷ್ಣ ಜನ್ಮಾಷ್ಟಮಿ: ಬೋರಬಂಡ ಲಕ್ಷ್ಮೀ ತಿಮ್ಮಪ್ಪ ದೇವಸ್ಥಾನಕ್ಕೆ ಹರಿದು ಬಂದ ಭಕ್ತಸಾಗರ

ಯಾದಗಿರಿ/ ಗುರುಮಠಕಲ್ : ತಾಲೂಕಿನ ಬೋರಬಂಡ ಲಕ್ಷ್ಮೀ ತಿಮ್ಮಪ್ಪ ದೇವಸ್ಥಾನದಲ್ಲಿ ಇಂದು ಸಾಂಪ್ರದಾಯಿಕ ವಿಧಿ ವಿಧಾನಗಳಿಂದ ಕೃಷ್ಣ ಜನ್ಮಾಷ್ಟಮಿ ಭಕ್ತಿ ಶ್ರದ್ಧೆಯಿಂದ ಆಚರಣೆ ಮಾಡಲಾಯಿತು.

ಹನುಮಾನ್ ದೇವಸ್ಥಾನದಿಂದ ಪಲ್ಲಕ್ಕಿ ಮೆರವಣಿಗೆ ನೋಡಲು ನಯನ ಮನೋಹರವಾಗಿತ್ತು.
ಈ ಕುರಿತು ಮಾತನಾಡಿದ ಲಕ್ಷ್ಮಿ ತಿಮ್ಮಪ್ಪ ದೇವಸ್ಥಾನದ ವ್ಯವಸ್ಥಾಪಕರಾದ ನರೇಂದ್ರ ರಾಠೋಡ್, ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಅಪಾರ ಭಕ್ತರು ಬಂದು ಆಚರಣೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಶೋಭೆ ತಂದು ಕೊಟ್ಟಿದ್ದಾರೆ ಎಂದು ಹೇಳಿದರು.

ಬೆಳಿಗ್ಗೆಯಿಂದಲೇ ದೇವರಿಗೆ ವಿಶೇಷ ಪೂಜೆ ಮತ್ತು ವಿಶೇಷ ಅಲಂಕಾರ ಮಾಡಲಾಗಿತ್ತು,
ಮೆರವಣಿಗೆ ವೇಳೆ ಮಹಿಳೆಯರು ಕುಂಭ ಕಳಶ,
ಯುವಕರು ಬಳಗ ಮೊಸರಿನ ಮಡಿಕೆ ಹೊಡೆಯುವುದು ವಿಶೇಷವಾಗಿ ಆಕರ್ಷಣೆಯಾಗಿತ್ತು.

ದೇವಸ್ಥಾನದ ವತಿಯಿಂದ ಬಂದಿರುವ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು,
ಕಾರ್ಯಕ್ರಮದಲ್ಲಿ ಪಾಲ್ಗೊಂಡ ಭಕ್ತರು ಶ್ರೀ ಕೃಷ್ಣ ಹಾಗೂ ಶ್ರೀ ಲಕ್ಷ್ಮೀ ತಿಮ್ಮಪ್ಪನ ಕೃಪೆಗೆ ಪಾತ್ರರಾದರು.

ಈ ಸಂದರ್ಭದಲ್ಲಿ, ಕಾಶಿನಾಥ ರಾಠೋಡ್, ರಮೇಶ್ ಪವಾರ್, ಅಯ್ಯಪ್ಪದಾಸ್ ರಾಠೋಡ್, ಡಾ.ವೆಂಕಟಮ್ಮ, ಲಕ್ಷ್ಮಿಬಾಯಿ ಸೇರಿದಂತೆ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!