ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜದ ವತಿಯಿಂದ ನಾಳೆ (ಆಗಸ್ಟ್ 19) ರಂದು ಕಲಬುರ್ಗಿಯಲ್ಲಿ ಪ್ರತಿಭಟನೆ ‌ ‌


ಕಲಬುರಗಿ :ಬೆಂಗಳೂರಿನಲ್ಲಿ ನಡೆಯುತ್ತಿರುವ 2025 ನೇ ಸಾಲಿನ ಮುಂಗಾರು ಅಧಿವೇಶನದಲ್ಲಿ ಹಡಪದ ಅಪ್ಪಣ್ಣ ಸಮಾಜದ ನಾನಾ ಬೇಡಿಕೆಗಳು ಹಾಗೂ ಮೀಸಲಾತಿಗಾಗಿ ದಿನಾಂಕ 19-08-2025 ರಂದು ಮಂಗಳವಾರ ಬೆಳಿಗ್ಗೆ 10:30 ಕ್ಕೆ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಮಠಾಧೀಶರೊಂದಿಗೆ ಹಾಗೂ ನೂರಾರು ಹಡಪದ ಸಮಾಜದ ಬಾಂಧವರೂಂದಿಗೆ ಹಾಗೂ ತಾಯಂದಿರು ಯುವಕ ಮಿತ್ರರು ಸೇರಿ ಪ್ರತಿಭಟನೆ ರ್ಯಾಲಿ ಮಾಡುತ್ತಾ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಹಿಂದುಳಿದ ಇಲಾಖೆ ಸಚಿವರಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಗುವುದು. ಕಾರಣ ಹಡಪದ ಅಪ್ಪಣ್ಣ ಸಮಾಜದ ಹಲವಾರು ಬೇಡಿಕೆಗಳು,ಜ್ವಲಂತ ಸಮಸ್ಯೆಗಳು ಕ್ಷೌರಿಕಕರ ಮೇಲೆ ದಿನನಿತ್ಯ ನಡೆಯುತ್ತಿರುವ ಮಾರಣಾಂತಿಕ ಹಲ್ಲೆಗಳು ಹಾಗೂ ಜಾತಿ ನಿಂದನೆ ಹೀಗೆ ಹಲವು ಬಗೆಯ ಸಮಸ್ಯೆಗಳು ಹಾಗೂ ನಾನಾ ಬೇಡಿಕೆಗಳು ಹಾಗೂ ಹಿಂದುಳಿದ ವರ್ಗಗಳಲ್ಲಿ ಅತಿ ಹಿಂದುಳಿದ ಹಡಪದ ಕ್ಷೌರಿಕ ಸಮಾಜಕ್ಕೆ ಸಾಮಾಜಿಕ ನ್ಯಾಯ ನೀಡಬೇಕಾಗಿ ಹಾಗೂ ಹಿಂದುಳಿದ ವರ್ಗಗಳಲ್ಲಿ ಒಳ ಮೀಸಲಾತಿ ನೀಡಬೇಕಾಗಿ ಬೃಹತ್ ಪ್ರಮಾಣದ ಹೋರಾಟ ಮಾಡುತ್ತಿದ್ದು, ಈ ಸದರಿ ಹೋರಾಟಕ್ಕೆ ಹಡಪದ ಸಮಾಜದ ಭಾಂಧವರು, ತಾಯಂದಿರು ,ಯುವಕರು ಆತ್ಮೀಯ ಸಹೋದರರು ಹಾಗೂ ಅಂಗಡಿ ಮಾಲೀಕರು ಕ್ಷೌರಿಕ ವೃತ್ತಿಯನ್ನು ಮಾಡುವ ಕಾಯಕ ಬಂಧುಗಳು ಅತಿ ಹೆಚ್ಚು ಸಂಖ್ಯೆಯಲ್ಲಿ ಬಂದು ಸರ್ಕಾರದ ಗಮನ ಸೆಳೆಯಬೇಕು ಹಾಗೂ ನಮ್ಮ ಕೊಗು ಸರ್ಕಾರಕ್ಕೆ ಮುಟ್ಟಬೇಕೆಂದರೆ ತಾವು ಹೆಚ್ಚಿನ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಭಾಂದವರು ಬಂದು ಈ ಹೋರಾಟ ವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧ್ಯಕ್ಷ ಈರಣ್ಣ ಸಿ. ಹಡಪದ ಸಣ್ಣೂರ ಮತ್ತು ಜಿಲ್ಲಾ ಕಾರ್ಯಾಧ್ಯಕ್ಷ ಭಗವಂತ ಹಡಪದ ಕಿರಣಗಿ, ಮತ್ತು ಜಿಲ್ಲಾ ಪ್ರ.ಕಾರ್ಯದರ್ಶಿ ರಮೇಶ್ ಹಡಪದ ನೀಲೂರ , ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಸೇರಿದಂತೆ ಈ ಪತ್ರಿಕೆಯ ಮೂಲಕ ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾಧ್ಯಕ್ಷರಾದ ಈರಣ್ಣ ಸಿ ಹಡಪದ ಸಣ್ಣೂರ ಅವರು ತಿಳಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!