ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಿಂದುಳಿದ ವರ್ಗದವರ ಶ್ರೇಯೋಭಿವೃದ್ಧಿಗೆ ಡಿ. ದೇವರಾಜ ಅರಸು ಕೊಡುಗೆ ಅಪಾರ

ಬಳ್ಳಾರಿ / ಕಂಪ್ಲಿ : ಬಡವರ ಕಲ್ಯಾಣ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಹಿಂದುಳಿದ ವರ್ಗದವರ ಶ್ರೇಯೋಭಿವೃದ್ಧಿಗೆ ಡಿ.ದೇವರಾಜ ಅರಸು ಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ಗ್ರೇಡ್-2 ತಹಶೀಲ್ದಾರ್ ಷಣ್ಮುಖಪ್ಪ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಛೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಡಿ.ದೇವರಾಜ ಅರಸು ಅವರ 119ನೇ ಜನ್ಮ ದಿನಾಚರಣೆ ಪ್ರಯುಕ್ತ ಬುಧವಾರ ಭಾವಚಿತ್ರಕ್ಕೆ ಪೂಜೆ ಹಾಗೂ ಪುಷ್ಪ ನಮನ ಸಲ್ಲಿಸಿದ ನಂತರ ಮಾತನಾಡಿ, ಬಡ ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಮೊಟಕುಗೊಳಿಸಬಾರದು ಎಂಬ ಕಾರಣಕ್ಕೆ ವಿದ್ಯಾರ್ಥಿ ನಿಲಯಗಳನ್ನು ತೆರೆದು ಎಲ್ಲರೂ ಶಿಕ್ಷಣವಂತರಾಗಬೇಕು ಎಂಬ ಸಂಕಲ್ಪ ಮಾಡಿದರು. ಮನುಷ್ಯರನ್ನು ಮನುಷ್ಯರನ್ನಾಗಿ ನೋಡಬೇಕು’. ಹೊಲ ಉಳುವವನೇ ಒಡೆಯ ಎಂದು ನೊಂದವರ ಧ್ವನಿಯಾಗಿ, ನಿರಾಶ್ರಿತರಿಗೆ ಆಶ್ರಯ ಕೊಟ್ಟರು. ಕೆಳವರ್ಗದವರ ಬಾಳಿಗೆ ಬೆಳಕಾದರು’ ಎಂದರು.
ದೇವರಾಜ ಅರಸು ಹಿಂದುಳಿದ ವರ್ಗದ ವಸತಿ ನಿಲಯ ಪಾಲಕ ಗಾದಿಲಿಂಗಪ್ಪ ಮಾತನಾಡಿ, ಶ್ರೀಮಂತ ಅರಸು ಮನೆತನದಲ್ಲಿ ಹುಟ್ಟಿದರೂ ಸಾಮಾನ್ಯ ರೈತನಾಗಿ ಬದುಕಿ, ತಳ ಸಮುದಾಯದ ಏಳಿಗೆಗೆ ದೇವರಾಜ ಅರಸು ಶ್ರಮಿಸಿದರು. ಅವರ ತತ್ವ–ಸಿದ್ಧಾಂತವನ್ನು ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ದೇವರಾಜು ಅರಸು ನೀಡಿರುವ ಯೋಜನೆಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಶಿರಸ್ತೇದಾರ ರಮೇಶ, ಎಫ್‌.ಡಿ.ಸಿ ಮೌನೇಶ, ನಿಲಯ ಪಾಲಕ ವಿರುಪಾಕ್ಷಿ, ಅಡುಗೆ ಸಹಾಯಕರು ಸೇರಿದಂತೆ ಕಂದಾಯ ಇಲಾಖೆ ಸಿಬ್ಬಂದಿಗಳು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!