ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮೊದಲ ಬಾರಿಗೆ ನಡೆದ ಶ್ರೀ ರಂಗನಾಥಸ್ವಾಮಿ ಗಂಗೆಸ್ಥಳ ಮೆರವಣಿಗೆ ಹಾಗೂ 25ನೇ ವರ್ಷದ ವಾರ್ಷಿಕೋತ್ಸವ

ಬಳ್ಳಾರಿ / ಕಂಪ್ಲಿ : ತಾಲೂಕಿನ ನಂ.10 ಮುದ್ದಾಪುರ ಗ್ರಾಮದಲ್ಲಿ ಸಾವಿರಾರು ಭಕ್ತರ ಆರಾಧ್ಯ ದೈವ ಶ್ರೀ ರಂಗನಾಥಸ್ವಾಮಿ ಗಂಗೆಸ್ಥಳ ಮೆರವಣಿಗೆ ಹಾಗೂ 25ನೇ ವರ್ಷದ ವಾರ್ಷಿಕೋತ್ಸವ ಸಡಗರ ಸಂಭ್ರಮದಿಂದ ಬುಧವಾರ ನಡೆಯಿತು.
ಇಲ್ಲಿನ ಮುದ್ದಾಪುರ ಗ್ರಾಮದಲ್ಲಿ ನೆಲೆಸಿ, ಪ್ರಾಚೀನ ಕಾಲದ ಇತಿಹಾಸ ಹೊಂದಿದ ರಂಗನಾಥಸ್ವಾಮಿಯನ್ನು ಸಹಸ್ರಾರು ಭಕ್ತರು ದಿನನಿತ್ಯದಲ್ಲಿ ಆರಾಧಿಸುತ್ತಾ ಬಂದಿದ್ದಾರೆ. ಸ್ವಾಮಿಯ ಕೃಪೆಗೆ ಪಾತ್ರರಾದ ಭಕ್ತರು ಇದೇ ಮೊದಲ ಬಾರಿಗೆ ಗಂಗೆಸ್ಥಳ ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಮಾಡಿದರು. ಇಲ್ಲಿನ ಗೌರಮ್ಮ ಕೆರೆ ಬಳಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಮೆರವಣಿಗೆ ಆರಂಭಿಸಿ, ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಸಾಗಿ, ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಸಮಾವೇಶಗೊಂಡಿತು. ಇಲ್ಲಿನ ಮೆರವಣಿಗೆಯಲ್ಲಿ ತನುಗೊಡ, ಮಹಿಳೆಯರ ಕಳಸ, ಡೊಳ್ಳು ಕುಣಿತ, ತಾಷಾರಾಂಡೋಲ್ ಸೇರಿದಂತೆ ನಾನಾ ಕಲಾ ಪ್ರಕಾರಗಳು ಮೆರಗು ನೀಡಿದವು. ಇಲ್ಲಿನ ದೇವಸ್ಥಾನದಲ್ಲಿ ಮಹಾಮಂಗಳಾರತಿ ಸೇರಿದಂತೆ ವಿಶೇಷ ಧಾರ್ಮಿಕ ಕೈಂಕಾರ್ಯಗಳು ಶ್ರದ್ಧೆಯಿಂದ ನೆರವೇರಿದವು. ನಂತರ ಭಕ್ತರಿಗೆ ಅನ್ನ ಸಂತರ್ಪಣೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಯಾದವ ಸಮಾಜದ ಮುಖಂಡರು, ಯುವಕರು, ಮಹಿಳೆಯರು ಸೇರಿದಂತೆ ಸಕಲ ಸದ್ಭಕ್ತರು ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!