ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗಣೇಶ ಚತುರ್ಥಿ, ಈದ್ ಮಿಲಾದ್ ಆಚರಣೆಗೆ ಇಲ್ಲ ಡಿಜೆ, ಅಹಿತಕರ ಘಟನೆ ಜರುಗಿದರೆ ಆಯೋಜಕರ ಮೇಲೆ ಕ್ರಮ: ಎಸ್.ಪಿ ಡಾ. ಶೋಭರಾಣಿ ವಿ. ಜೆ.

ಬಳ್ಳಾರಿ / ಕಂಪ್ಲಿ : ಈದ್ ಮಿಲಾದ್, ಗಣೇಶ ಚತುರ್ಥಿ ಎರಡು ಹಬ್ಬಗಳು ಒಟ್ಟಿಗೆ ಇರುವುದರಿಂದ ಎಲ್ಲರೂ ಸ್ನೇಹ ಸೌಹಾರ್ದಯುತವಾಗಿ ಹಬ್ಬಗಳನ್ನು ಆಚರಿಸಬೇಕೆಂದು ಬಳ್ಳಾರಿ ಜಿಲ್ಲಾ ಎಸ್ ಪಿ . ಡಾ. ಶೋಭರಾಣಿ ವಿ. ಜೆ. ಹೇಳಿದರು.

ಬಳ್ಳಾರಿ ಜಿಲ್ಲೆಯ ಕಂಪ್ಲಿ ನಗರದ ಠಾಣೆ ಆವರಣದಲ್ಲಿ ಪೊಲೀಸ್ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದ್ದ ಹಿಂದೂ-ಮುಸ್ಲಿಂ ಮುಖಂಡರ ಶಾಂತಿ ಸಭೆಯಲ್ಲಿ ಮಾತನಾಡಿದ ಎಸ್ಪಿ ಡಾ. ಶೋಭರಾಣಿ ವಿ. ಜೆ. ಅವರು ಯಾರು ಕೂಡ ಪಿಓಪಿ ಗಣೇಶ್ ಮೂರ್ತಿ ಬಳಸದೇ ಪರಿಸರ ಸ್ನೇಹಿ ಮಣ್ಣಿನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಬೇಕು. ಪ್ಲೆಕ್ಸ್, ಬಟಿಂಗ್ಸ್ ಹಾಕಬೇಕಾದರೆ ಅನುಮತಿ ಪಡೆಯಬೇಕು. ಎಲ್ಲಾ ಧರ್ಮೀಯರು ಸೇರಿ ಕಾನೂನು ಸುವ್ಯವಸ್ಥೆಗೆ ಹಾಗೂ ಕೋಮು ಭಾವನೆಗಳಿಗೆ ಧಕ್ಕೆ ಬಾರದ ರೀತಿ ಶಾಂತಿ ಸೌಹಾರ್ದತೆಯಿಂದ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳನ್ನು ಆಚರಿಸಬೇಕು ಸಾರ್ವಜನಿಕರ ಸ್ಥಳಗಳಲ್ಲಿ ಈಗಾಗಲೇ ಸಿಸಿಟಿವಿಗಳನ್ನು ಅಳವಡಿಸಿದ್ದು ಎಲ್ಲರೂ ಜಾಗೃತೆಯಿಂದ ಇರಲು ತಿಳಿಸಿದರು. ಗಣೇಶ ಪ್ರತಿಷ್ಠಾಪನೆಗೆ ಅಗತ್ಯ ಇರುವ ಸ್ಥಳ ಪೆಂಡಾಲ್ ವಿದ್ಯುತ್ ಸಂಪರ್ಕ ಇತರೆ ಪರವಾನಿಗೆಗಳನ್ನು ಏಕಗವಕ್ಷಿ ಪದ್ಧತಿ ಹೇಳಿ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ, ಗಣೇಶ ಪ್ರತಿಷ್ಠಾಪನೆ ಸ್ಥಳದಲ್ಲಿ ಸಿಸಿಟಿವಿ ಕಡ್ಡಾಯ, ಒಂದು ಧರ್ಮಕ್ಕೆ ತೊಂದರೆ ಕೊಡದಂತೆ ಹಬ್ಬ ಆಚರಿಸಬೇಕು ಎಚ್ಚರಿಕೆ ನೀಡಿದರು.

ಈ ವೇಳೆ ಡಿ ವೈ ಎಸ್ ಪಿ ಪ್ರಸಾದ್ ಗೋಕಲೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕೆಬಿ ವಾಸು ಕುಮಾರ್ ಪಿಎಸ್ಐ ಅವಿನಾಶ್ ಕಾಂಬ್ಳೆ, ಎಎಸ್ಐ ಬಸವರಾಜ, ಪೊಲೀಸ್ ಸಿಬ್ಬಂದಿಯವರು ಹಾಗೂ ಹಿಂದೂ-ಮುಸ್ಲಿಂ ಸಮುದಾಯದ ಮುಖಂಡರು ಸೇರಿದಂತೆ ಪ್ರಗತಿಪರ ಸಂಘ ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!