ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಿದ್ದರಾಮಯ್ಯನವರು ಸತ್ಯಾಂಶವನ್ನು ಜನತೆಗೆ ತಿಳಿಸಲಿ :ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

ಬೆಳಗಾವಿ: ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಯ ಜನರ ಬಹುದಿನಗಳ ಬೇಡಿಕೆಯ ಮೀಸಲಾತಿ ಹೆಚ್ಚಳ ಮಾಡಿ ಒಳ ಮೀಸಲಾತಿ ನಿಡಿದ್ದ ಹಿಂದಿನ ರಾಜ್ಯ ಬಿಜೆಪಿ ಸರ್ಕಾರದ ನಿಲುವನ್ನು ಪ್ರಶ್ನಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.
ಮಾಧ್ಯಮಗಳಿಗೆ ಪ್ರಕಟಣೆ ಮೂಲಕ ತಿಳಿಸಿದ ಅವರು, ಜಸ್ಟಿಸ್ ಸದಾಶಿವ ಆಯೋಗದ ವರದಿಯನ್ನೂ ಸರಿಯಾಗಿ ಪಾಲಿಸಿದಂತೆ ಕಾಣುತ್ತಿಲ್ಲ. ಅದೇ ರೀತಿ ನ್ಯಾ.ನಾಗಮೋಹನ್ ದಾಸ್ ವರದಿಯನ್ನೂ ಸರಿಯಾಗಿ ಪಾಲಿಸಿದಂತಿಲ್ಲ ಎಂದು ಆಕ್ಷೇಪಿಸಿದ್ದಾರೆ. ನ್ಯಾ.ನಾಗಮೋಹನ್ ದಾಸ್ ವರದಿಯಲ್ಲಿ ಎ, ಬಿ, ಸಿ, ಡಿ, ಇ ಎಂದು 5 ವರ್ಗಗಳನ್ನು ಮಾಡಿದ್ದರು. ಅದನ್ನು ಇವರು ಎ, ಬಿ, ಸಿ ಎಂದು ಮಾಡಿದ್ದಾರೆ.
ನರೇಂದ್ರ ಸ್ವಾಮಿ ಮೊದಲಾದವರ ಮೂಲಕ ನೀವೇ ವಿಂಗಡಣೆ ಮಾಡುವುದಾದರೆ, ಸರಕಾರ ಮತ್ತು ಸಿದ್ದರಾಮಯ್ಯನವರಿಗೆ ಜಸ್ಟಿಸ್ ಸದಾಶಿವ ಆಯೋಗ, ನ್ಯಾ.ನಾಗಮೋಹನ್ ದಾಸ್ ಆಯೋಗಕ್ಕೆ ನೂರಾರು ಕೋಟಿ ಖರ್ಚು ಮಾಡುವ ಅವಶ್ಯಕತೆ ಏನಿತ್ತು.
ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಅಧಿಕಾರದಲ್ಲಿ ಇದ್ದಾಗ ಅವರು ಪರಿಶಿಷ್ಟ ಜಾತಿ, ಪಂಗಡಗಳ ಕುರಿತು ಒಂದು ದಿಟ್ಟ ನಿರ್ಧಾರ ಮಾಡಿದ್ದರು. ಅವತ್ತು ಬೊಮ್ಮಾಯಿಯವರು ಪರಿಶಿಷ್ಟ ಜಾತಿಗೆ ಶೇ‌. 15 ಇದ್ದುದನ್ನು ಶೇ 17ಕ್ಕೆ ಏರಿಸಿದ್ದರು. ಪರಿಶಿಷ್ಟ ಪಂಗಡಕ್ಕೆ ಶೇ 3 ಇದ್ದುದನ್ನು ಶೇ 7ಕ್ಕೆ ಏರಿಕೆ ಮಾಡಿದ್ದರು. ಆಗ ವಿಪಕ್ಷ ನಾಯಕರಾಗಿದ್ದ ಇದೇ ಸಿದ್ದರಾಮಯ್ಯನವರು, ಒಳ ಮೀಸಲಾತಿಯ ಬಿಜೆಪಿ ಸರಕಾರದ ನಿರ್ಧಾರವನ್ನು ಯಾವುದೂ ಅನುಷ್ಠಾನ ಆಗಿಲ್ಲ; ಇವರು ಬೂಟಾಟಿಕೆ- ನಾಟಕ ಮಾಡುತ್ತಿದ್ದಾರೆ ಎಂದು ರಾಜ್ಯಾದ್ಯಂತ ಓಡಾಡಿ ಅಪಪ್ರಚಾರ ಮಾಡಿದ್ದರು ಎಂದು ಟೀಕಿಸಿದರು.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾಕೆ ಓಡಿ ಹೋಗುವ ಕೆಲಸ ಮಾಡಿದ್ದಾರೆ. ವಿಪಕ್ಷ ನಾಯಕರು ಚರ್ಚೆ ಮಾಡಬೇಕೆಂದು ಕೋರಿದರೂ ಪಲಾಯನವಾದ ಮಾಡಿದ್ದಾರೆ. ಈ ಮೂಲಕ ಸದನಕ್ಕೆ ಅಗೌರವ ತೋರಿದ್ದಾರೆ ಎಂದರು.
ಜಸ್ಟಿಸ್ ಸದಾಶಿವ ಆಯೋಗವನ್ನು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಘೋಷಣೆ ಮಾಡಿತ್ತೇ ವಿನಾ ಆ ಆಯೋಗಕ್ಕೆ ಹಣಕಾಸಿನ ನೆರವನ್ನು ಕೊಟ್ಟು ವ್ಯವಸ್ಥೆ ಮಾಡಿದ್ದು, ಯಡಿಯೂರಪ್ಪ ಅವರ ನೇತೃತ್ವದ ಹಿಂದಿನ ಬಿಜೆಪಿ ಸರಕಾರ. ಅದನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಲು ಬಸವರಾಜ ಬೊಮ್ಮಾಯಿಯವರು ಮುಂದಾಗಿದ್ದರು.
ದತ್ತಾಂಶ ಇಟ್ಟುಕೊಂಡು ವರ್ಗೀಕರಣ ಮಾಡಬೇಕಿತ್ತು. ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಿಂದುಳಿದಿರುವಿಕೆ ವಿಚಾರವನ್ನು ಇಟ್ಟುಕೊಂಡು ಒಳ ಮೀಸಲಾತಿ ಕೊಡಬೇಕೇ ಹೊರತು ಜನಸಂಖ್ಯೆ ಆಧಾರದಲ್ಲಿ ಅಲ್ಲ ಎಂದು ಪ್ರತಿಪಾದಿಸಿದ್ದಾರೆ.
ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ಪ್ರಾಮಾಣಿಕ ಉತ್ತರ ಕೊಡಬೇಕು. ಹಿಂದೆ ಬಿಜೆಪಿ ಸರಕಾರ ಶೇ 17 ಮೀಸಲಾತಿ ಕೊಟ್ಟಾಗ ಅಪಪ್ರಚಾರ ಮಾಡಿದ್ದೀರಿ. ಈಗ ಅದೇ ಶೇ 17 ಅನ್ನು ಮುಂದಿಟ್ಟಿದ್ದೀರಲ್ಲವೇ? ಬಿಜೆಪಿ ಸರಕಾರ ಮಾಡಿದ್ದನ್ನು ಈಗಲಾದರೂ ಒಪ್ಪಿಕೊಳ್ಳಿ ಎಂದು ಆಗ್ರಹಿಸಿದರು.
ಸಿದ್ದರಾಮಯ್ಯನವರು ಸತ್ಯಾಂಶವನ್ನು ಜನತೆಗೆ ತಿಳಿಸಲಿ; ಅಲ್ಲದೇ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಅವರು ಒತ್ತಾಯಿಸಿದರು. ದತ್ತಾಂಶವಿಲ್ಲದೇ ಹೇಗೆ ಇದನ್ನು ಮಾಡಿದ್ದಾರೆ ಎಂಬುದೆ ಯಕ್ಷೆ ಪ್ರಶ್ನೆಯಾಗಿದೆ ಎಂದು ಹರಿಹಾಯ್ದಿದ್ದಾರೆ.

ವರದಿ ಮಂಜು. ಎಂ. ಚಿಕ್ಕಣ್ಣವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!