ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಆ.24 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ/ ಕಂಪ್ಲಿ : ಕಂಪ್ಲಿ ಜೆಸ್ಕಾಂ ವ್ಯಾಪ್ತಿಯ 110/33/11ಕೆವಿ ಉಪ ಕೇಂದ್ರದಲ್ಲಿ ವಿದ್ಯುತ್ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುದರಿಂದ ಆ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕಂಪ್ಲಿ ಉಪಕೇಂದ್ರದ ವ್ಯಾಪ್ತಿಗೆ ಬರುವ ಪಟ್ಟಣ ಮತ್ತು ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಕಂಪ್ಲಿ ವ್ಯಾಪ್ತಿಯ ನಿರಂತರ ಜ್ಯೋತಿ ಮಾರ್ಗಗಳಾದ ಎಫ್2-ಕಂಪ್ಲಿ ಮತ್ತು ಎಫ್3-ಕೈಗಾರಿಕಾ, ಎಫ್4-ಕಂಪ್ಲಿ ಕೊಟ್ಟಾಲ್, ಎಫ್12-ಬಸವೇಶ್ವರನಗರ, ಎಫ್13-ಪ್ರಭು ಕ್ಯಾಂಪ್ ಮತ್ತು ಎಫ್6-ವಿದ್ಯಾಪೀಠ, ಎಫ್11-ಹಂಪಾದೇವನಹಳ್ಳಿ
ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಪಂಪ್ ಸೆಟ್ ವಿದ್ಯುತ್ ಮಾರ್ಗಗಳಾದ ಎಫ್1-ದೇವಸಮುದ್ರ, ಎಫ್5-ಜಾನೂರು, ಎಫ್7-ಸಣಾಪುರ, ಎಫ್8-ಕೆ.ತಿಮ್ಮಲಾಪುರ ಹಾಗೂ 33ಕೆವಿ ಕಂಪ್ಲಿ ಉಪ ಕೇಂದ್ರದ ವ್ಯಾಪ್ತಿಗೆ ಬರುವ ಮಾರ್ಗಗಳಾದ ಎಫ್4
ಮಾರ್ಗಗಳಾದ ಎಫ್4-ರಾಮಸಾಗರ, ಎಫ್5-ಗೌರಮ್ಮಕೆರೆ ಮತ್ತು ಎಫ್3-ಬೆಳಗೋಡುಹಾಳ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಕಂಪ್ಲಿಗೆ ಸಂಬಂಧಿಸಿದ ಸೆಟ್(ಐಪಿ ಸೆಟ್) ಮೇಲೆ ತಿಳಿಸಿದ ಮಾರ್ಗಗಳಲ್ಲಿ ಬೆಳಿಗ್ಗೆ 3 ರಿಂದ 10 ರವರೆಗೆ (7ತಾಸು) ವಿದ್ಯುತ್ ಸರಬರಾಜು ಮಾಡಲಾಗುವುದು. ಆ ಸಂದರ್ಭದಲ್ಲಿ
ಸಾರ್ವಜನಿಕರು ಯಾವುದೇ ತರಹದ ವಿದ್ಯುತ್ ದುರಸ್ಥಿ ಕಾರ್ಯ ಪೂರ್ವಾನುಮತಿ ಇಲ್ಲದೇ ಮಾಡಬಾರದು, ಒಂದು ವೇಳೆ ವಿದ್ಯುತ್ ಅಪಘಾತ ಸಂಭವಿಸಿದ್ದಲ್ಲಿ ಜೆಸ್ಕಾಂ ಕಂಪನಿ ಜವಾಬ್ದಾರಿಯಾಗಿರುವುದಿಲ್ಲ. ಹಾಗಾಗಿ ವಿದ್ಯುತ್ ಗ್ರಾಹಕರು, ಸಾರ್ವಜನಿಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!