ಧರ್ಮಸ್ಥಳದ ಕುರಿತು ಅಪಪ್ರಚಾರ ಖಂಡಿಸಿ ಅಂತಹ ವ್ಯಕ್ತಿಗಳ ಮೇಲೆ ಕ್ರಮಕ್ಕೆ ಒತ್ತಾಯಿಸಿ ತಾಲೂಕ ಭಾ. ಜ. ಪ ವತಿಯಿಂದ ತಹಶೀಲ್ದಾರ್ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ.
ಯಾದಗಿರಿ/ ಗುರುಮಠಕಲ್: ಅಸಂಖ್ಯಾತ ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರವಾಗಿರುವ ಧರ್ಮಸ್ಥಳ ಕುರಿತಾದ ಅಪಪ್ರಚಾರ ಖಂಡಿಸಿ ಭಾರತೀಯ ಜನತಾ ಪಾರ್ಟಿ ಗುರುಮಠಕಲ್ ತಾಲೂಕಾ ಅಧ್ಯಕ್ಷರಾದ ಶ್ರೀ ನರಸಿಮುಲು ನಿರೇಟಿ ಇವರ ನೇತೃತ್ವದಲ್ಲಿ ಉಪ ತಹಶೀಲ್ದಾರ್ ನರಸಿಂಹಸ್ವಾಮಿ ಅವರಿಗೆ ಮನವಿ ನೀಡಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳವು ಕೇವಲ ಕರ್ನಾಟಕವಲ್ಲದೇ ದೇಶಾದ್ಯಂತ ಕೋಟ್ಯಾಂತರ ಭಕ್ತಾಧಿಗಳನ್ನು ಹೊಂದಿದ್ದು, ಹಿಂದೂಗಳ ಧಾರ್ಮಿಕ ಭಾವನೆಯನ್ನು ಅಪಮಾನಿಸುವ ದುರುದ್ದೇಶದಿಂದ ಕೆಲವು ಕಿಡಿಗೇಡಿಗಳು ಹಾಗೂ ಎಡಚರರು ಸುಳ್ಳು ಅಪಪ್ರಚಾರವನ್ನು ಮಾಡುತ್ತಿರುವುದನ್ನು ಖಂಡಿಸಿ,ಇದರ ಹಿಂದಿರುವ ಕಿಡಿಗೇಡಿಗಳಿಗೆ ಮತ್ತು ಅನಾಮಿಕ ವ್ಯಕ್ತಿಯ ಹಿಂದೆ ಕೃತ್ಯಕ್ಕೆ ಕುಮ್ಮಕ್ಕು ನೀಡುವವರಿಗೆ ಶಿಕ್ಷೆಗೆ ಒಳಪಡಿಸಬೇಕೆಂದು ಮನವಿ ನೀಡಿದರು.
ಈ ಸಂದರ್ಭದಲ್ಲಿ ಚಂದೂಲಾಲ ಚೌಧರಿ, ವೆಂಕಟಪ್ಪ ಅವಂಗಪುರ, ರಮೇಶ್ ತಾಂಡುರಕರ್, ಜಗದೀಶ್ ಚಂದ್ರ ಮೆಂಗಜಿ, ಲಕ್ಷ್ಮಣ ಆಶನಾಳ, ರವೀಂದ್ರರೆಡ್ಡಿ ಪೋತುಲ್, ಸಾಯಿಲು ಮಡಿವಾಳ, ರವಿ ಅಕ್ಕಿ ಭಾ. ಜ. ಪ ಪದಾಧಿಕಾರಿಗಳು ಹಾಜರಿದ್ದರು.
ವರದಿ: ಜಗದೀಶ್ ಕುಮಾರ್ ಭೂಮಾ



















