ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಲೆಗಳಿಗೆ 18 ದಿನ ದಸರಾ ರಜೆ: ಇಲ್ಲಿದೆ ಸಂಪೂರ್ಣ ಪಟ್ಟಿ

ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾರಣಾಂತರಗಳಿಂದ ಸಾಲು ರಜೆಗಳನ್ನೇ ಘೋಷಣೆ ಮಾಡಲಾಗಿದೆ. ಪ್ರತಿಭಟನೆ, ಹವಾಮಾನ ವೈಪರಿತ್ಯದಂತಹ ಸಂದರ್ಭಗಳಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಜೆ ನೀಡಲಾಗಿದೆ. ಇನ್ನು ಇದೀಗ ಗಣೇಶ ಹಬ್ಬ ಇದ್ದು, ಬಳಿಕ ದಸರಾ ಬರಲಿದೆ. ಹಾಗಾದ್ರೆ, ಶಾಲೆಗಳಿಗೆ ದಸರಾ ರಜೆ ಎಷ್ಟು ದಿನ ಇರಲಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ ಶಾಲೆಗಳಿಗೆ ಸಾಲು ರಜೆಗಳನ್ನೇ ನೀಡಲಾಗಿದೆ. ಇದೀಗ ಗಣೇಶ ಹಬ್ಬದ ರಜೆಯೂ ಇದ್ದು, ಇದರಿಂದ ವಿದ್ಯಾರ್ಥಿಗಳಿಗೆ ರಜೆಗಳ ಹಬ್ಬದೂಟವನ್ನೇ ಬಡಿಸಿದಂತಾಗಿದೆ. ಈ ನಡುವೆಯೇ ಇದೀಗ ವಿದ್ಯಾರ್ಥಿಗಳಿಗೆ ಮತ್ತೊಂದು ಖುಷಿಯ ವಿಚಾರ ಇದೆ. ಮಧ್ಯಂತರ ಪರೀಕ್ಷೆಗಳು ಮುಗಿದ ನಂತರ ದಸರಾ ರಜೆ ನೀಡಲಾಗುತ್ತದೆ.
ಹೌದು.. ನಾಡಹಬ್ಬ ದಸರಾ ಮಹೋತ್ಸವ ಹಿನ್ನೆಲೆ ರಾಜ್ಯದ ಶಾಲಾ ಮಕ್ಕಳಿಗೆ ರಜೆಗಳು ಸಿಗಲಿವೆ. ರಾಜ್ಯ ಶಿಕ್ಷಣ ಇಲಾಖೆ ಹೊರಡಿಸಿರುವ ಶೈಕ್ಷಣಿಕ ವೇಳಾಪಟ್ಟಿ ಪ್ರಕಾರ, 2025ರ ದಸರಾ ರಜೆಯು ಸೆಪ್ಟೆಂಬರ್ 20ರಿಂದ ಅಕ್ಟೋಬರ್ 7ರ ವರೆಗೆ ಒಟ್ಟು 18 ದಿನಗಳು ಇರಲಿವೆ. ಆದ್ದರಿಂದ ವಿದ್ಯಾರ್ಥಿಗಳು ಮಧ್ಯಂತರ ಪರೀಕ್ಷೆಗಳು ಯಾವಾಗ ಮುಗಿಯಲಿಯೋ ಎನ್ನುವ ಕಾತರದಲ್ಲಿದ್ದಾರೆ.

ಸಾಮಾನ್ಯವಾಗಿ ದಸರಾ ಹಬ್ಬದ ವೇಳೆ ಶಾಲೆಗಳಿಗೆ 15 ರಿಂದ ಒಂದು ತಿಂಗಳಿಗಳ ಕಾಲ ರಜೆ ನೀಡಲಾಗುತ್ತದೆ. ಅದರಂತೆಯೇ ಈ ಬಾರಿಯೂ 18 ದಿನಗಳ ಕಾಲ ದಸರಾ ರಜೆಯನ್ನು ಘೋಷಣೆ ಮಾಡಲಾಗಿದೆ. ಈ ರಜೆಯನ್ನು ಮಧ್ಯಂತರ ಪರೀಕ್ಷೆಗಳು ಮುಗಿದ ಬಳಿಕ ವಿದ್ಯಾರ್ಥಿಗಳಿಗೆ ಅಧಿಕೃತವಾಗಿ ಪ್ರಕಟ ಮಾಡಲಾಗುತ್ತದೆ. ಇನ್ನೂ ಈ ರಜೆಯಲ್ಲಿ ಪೋಷಕರು ತಮ್ಮ ಮಕ್ಕಳ ಸಹಿತ ಕುಟುಂಬದ ಜೊತೆ ಪ್ರವಾಸ ಮಾಡಲು ಉತ್ತಮ ಸಮಯವಾಗಿದೆ. ಈಗಾಗಲೇ ಬಹುತೇಕ ಮಂದಿ ಮಕ್ಕಳ ಮಧ್ಯಂತರ ಪರೀಕ್ಷೆಗಳು ಮುಗಿಯುವಿಕೆಗಾಗಿಯೇ ಕಾದು ಕುಳಿತಿದ್ದಾರೆ.

ರಜೆಯ ನಡುವೆಯೂ ಶಿಕ್ಷಣ ಇಲಾಖೆ ಒಂದು ಪ್ರಮುಖ ಸೂಚನೆಯನ್ನು ಸಹ ನೀಡಿದೆ. ಅಕ್ಟೋಬರ್ 2 ರಂದು ರಜೆ ಇದ್ದರೂ ಕೂಡ ಎಲ್ಲಾ ಶಾಲಾ ಮಕ್ಕಳು ಮತ್ತು ಶಿಕ್ಷಕರು ಶಾಲೆಗೆ ಕಡ್ಡಾಯವಾಗಿ ಹಾಜರಾಗಬೇಕು. ಯಾಕಂದ್ರೆ ಈ ದಿನ ದೇಶಾದ್ಯಂತ ಎಲ್ಲಾ ಶಾಲೆಗಳಲ್ಲೂ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಣೆ ಮಾಡಲಾಗುತ್ತದೆ. ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೂಡಾ ಮಾಡಲಾಗುತ್ತದೆ.

ವರದಿ : ಪ್ರಸಾದ್ ಹೆಚ್. ಬಿ, ತೀರ್ಥಹಳ್ಳಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!