ಬಾಗಲಕೋಟೆ/ ಇಳಕಲ್ ತಾಲೂಕಿನ ಹಿರೇ ಓತಗೇರಿ ಗ್ರಾಮದಲ್ಲಿ ಸಿದ್ಧಿವಿನಾಯಕ ಸೇವಾ ಸಮಿತಿ ಹಿರೇಓತಗೇರಿ ಶ್ರೀ ವಿಜಯ ಮಾಂತೇಶ್ವರ ರಂಗಮಂದಿರದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಯಿತು.
ಇಲಕಲ್ ನಗರದಿಂದ ಅದ್ದೂರಿ ಮೆರವಣಿಗೆಯ ಮೂಲಕ ಗ್ರಾಮಕ್ಕೆ ಕರೆ ತರಲಾಯಿತು. ನಂತರ ವಿಜಯ ಮಹಾಂತೇಶ್ವರ ರಂಗಮಂದಿರದಲ್ಲಿ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿ ಸಿದ್ಧಿವಿನಾಯಕ ಸೇವಾ ಸಮಿತಿ ಯುವ ಮಿತ್ರರು ಪ್ರತಿಷ್ಠಾಪನೆ ಮಾಡಿದರು.
ಈ ಸಂದರ್ಭದಲ್ಲಿ ಗ್ರಾಮದ ಗುರಿಯರು ಯುವ ಮಿತ್ರರು ಉಪಸ್ಥಿತರಿದ್ದರು.
- ಕರುನಾಡ ಕಂದ



















