ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರೈತರಿಗೆ ಬೆಳೆ ವಿಮೆ ಬಗ್ಗೆ ಸರಕಾರ ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಬೇಕು : ವಿರುಪಾಕ್ಷಯ್ಯ ಪಂ. ಹಿರೇಮಠ ಜಿಲ್ಲಾಧ್ಯಕ್ಷರು

ಬಾಗಲಕೋಟೆ :ಅತಿವೃಷ್ಟಿ , ಅನಾವೃಷ್ಟಿ ಹಾಗೂ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆಹಾನಿ ಆದರೆ ಪರಿಹಾರಕ್ಕಾಗಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ ಭೀಮಾ ಯೋಜನೆಡಿಯಲ್ಲಿ ವಿಮಾ ಕಂಪನಿಗೆ ಹೋಬಳಿವಾರು ಸರಕಾರ ನಿಗದಿಪಡಿಸಿದ ಬೆಳೆಗೆ ಪ್ರತಿ ವರ್ಷ ರೈತರು ವಿಮಾ ಪ್ರೀಮಿಯಮ್ ಪಾವತಿಸಿದರೂ ಬೆಳೆ ಹಾನಿ ಆದ ಸಂದರ್ಭದಲ್ಲಿ ವಿಮಾ ಕಂಪನಿಯವರು ಜಿಲ್ಲೆಯಲ್ಲಿ ಕ್ಲೇಮ ಪಾವತಿಸದೇ ಸದಾ ಕಾಲ ಮೋಸ ಮಾಡಿ‌ ನಿಗದಿ ಪಡಿಸಿದ ಇನ್ಸೂರೆನ್ಸ್ ಕಂಪನಿಯವರು ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ತೊಡಗಿದ್ದು ತಕ್ಷಣ ಸರಕಾರ ಈ ಹಗರಣವನ್ನು ಸಿ.ಬಿ.ಐ ಇಲ್ಲವೆ ಸಿ.ಐ.ಡಿ ತನಿಖೆಗೊಳಪಡಿಸಿ ರೈತರಿಗೆ ಹಲವಾರು ವರ್ಷಗಳಿಂದ ಆಗಿರುವ ಮೋಸಕ್ಕೆ ನ್ಯಾಯ ದೊರಕಿಸಿಕೊಡಬೇಕೆಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಪಂ.ಹಿರೇಮಠ ಸರಕಾರಕ್ಕೆ ಒತ್ತಾಯಿಸಿದರು.

ಅವರು ಜಿಲ್ಲೆಯ ಇಳಕಲ್ ತಾಲೂಕಿನ ತಹಶೀಲ್ದಾರ ಕಚೇರಿ ಮುಂದೆ ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ಉತ್ತರ ಪ್ರಾಂತ ಜಿಲ್ಲಾ ಘಟಕ ಹಾಗೂ ಇಲಕಲ್ ತಾಲೂಕು ಘಟಕದ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಗೆ ತಹಶೀಲ್ದಾರ ಮೂಲಕ ಮನವಿ ಸಲ್ಲಿಸಿದ ನಂತರ ಮಾತನಾಡಿದರು.

ಇಲಕಲ್ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಹಾವರಗಿ ಮಾತನಾಡಿ ಕಳೆದ ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನಲ್ಲಿ ತೇವಾಂಶ ಹೆಚ್ಚಾಗಿ ಬೆಳೆಗಳಾದ ಈರುಳ್ಳಿ, ಗೋವಿನಜೋಳ, ಸಜ್ಜೆ, ತೊಗರಿ, ಹೆಸರು,ಹತ್ತಿ, ಜೋಳ,ಮೆಣಸಿನಕಾಯಿ ಸೇರಿದಂತೆ ಕೃಷಿ ಹಾಗೂ ತೋಟಗಾರಿಕೆ,ರೇಷ್ಮೆ ಇಲಾಖೆಯ ವಿವಿಧ ಬೆಳೆಗಳು ನೀರುಪಾಲಾಗಿದ್ದು , ರೈತರು ಈ ಬೆಳೆಗಳನ್ನು ಬೆಳೆಯಲು ಲಕ್ಷಾಂತರ ರೂಪಾಯಿಗಳನ್ನು ಖರ್ಚುಮಾಡಿದ್ದು, ರೈತರು ಸಂಕಷ್ಟದಲ್ಲಿ ಸಿಲುಕಿದ್ದು , ರೈತರಿಗೆ ಸರಕಾರ ಯಾವುದೇ ತಾಂತ್ರಿಕ ತೊಂದರೆ ನೆಪ ಹೇಳದೆ, ಸರಕಾರ ಬೆಳೆ ಹಾನಿಯಾದ ಜಮೀನಗಳ ಸಮೀಕ್ಷೆ ನಡೆಸಿ ನ್ಯಾಯೋಚಿತ ಬೆಳೆ ನಷ್ಟ ಪರಿಹಾರ ಒದಗಿಸಬೇಕೆಂದು ಆಗ್ರಹ ಪಡಿಸಿದರು.

” ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್‌ ಭೀಮಾ ಯೋಜನೆ, ರೈತರಿಗೆ ಅತ್ಯಂತ ಲಾಭದಾಯಕವಾಗಿದ್ದು. ಆದರೆ, ಹೋಬಳಿವಾರು ಕೆಲವು ಬೆಳೆಗಳಿಗೆ ಮಾತ್ರ ಬೆಳೆ ವಿಮೆ ಪಾವತಿಗೆ ಅವಕಾಶ ನೀಡಿದ್ದು ಎಲ್ಲಾ ಬೆಳೆಗಳಿಗೆ ವಿಮೆ ಪಾವತಿಸಲು ಅವಕಾಶ ನೀಡಬೇಕು, ಬೆಳೆ ವಿಮೆ ಪಾವತಿಸುವ ಅವಧಿಯನ್ನು ಮುಂದುವರೆಸಬೇಕು, ರೈತರಿಗೆ ಬೆಳೆ ವಿಮೆ ಬಗ್ಗೆ ಸರಕಾರ ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಬೇಕು “.

  • ವಿರುಪಾಕ್ಷಯ್ಯ ಪಂ. ಹಿರೇಮಠ ಜಿಲ್ಲಾಧ್ಯಕ್ಷರು ಭಾರತೀಯ ಕಿಸಾನ್ ಸಂಘ ಬಾಗಲಕೋಟೆ,

ಉತ್ತರ ಪ್ರಾಂತ ಕಾರ್ಯಕಾರಿಣಿ ಸದಸ್ಯ ಸುಬ್ಬರಾಯಗೌಡ ಪಾಟೀಲ ಮಾತನಾಡಿ ಬೆಳೆಗಳಿಗೆ ಆರ್.ಸಿ.ಎಪ್.ಜೈಕಿಸಾನ್ ದ ಜುವಾರಿ ಯೂರಿಯಾ ರಸಗೊಬ್ಬರ ಕೊರತೆಯಾಗಿದ್ದು ಈಗ ಅವಶಕತೆ ಇದ್ದು ತಕ್ಷಣ ಪೂರೈಸಬೇಕು. ಅತಿವೃಷ್ಟಿಯಿಂದಾಗಿ ಮನೆಗಳು ಬೀಳುತ್ತಿದ್ದು ಮರು ನಿರ್ಮಾಣಕ್ಕೆ ಪರಿಹಾರ ಒದಗಿಸಬೇಕು. ಈ ಮೇಲ್ಕಾಣಿಸಿದ ಎಲ್ಲಾ ಬೇಡಿಕೆಗಳನ್ನು ಶೀಘ್ರದಲ್ಲಿ ಈಡೇರಿಸಬೇಕೆಂದು ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ರೈತರು ಉಗ್ರಹೋರಾಟ ಮಾಡಬೇಕಾಗುತ್ತದೆ ಎಚ್ಚರಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಉಪಾಧ್ಯಕ್ಷ ಚಂದ್ರು ಗೌಡರ,ಪ್ರಧಾನ ಕಾರ್ಯದರ್ಶಿ ಮಂಜುನಾಥ ಗುಡಗುಂಟಿ, ದುರೀಣರಾದ ಬಸವರಾಜ ಅಂಗಡಿ,ಶರಷು ಗುಡಿಹಾಳ, ಬಸವರಾಜ ಕಂದಕೂರ, ರಾಚನಗೌಡ ಪಾಟೀಲ, ವೆಂಕಟೇಶ ಗದಗಿ, ವಿಶ್ವನಾಥ ಪಾಟೀಲ ಸೇರಿದಂತೆ ಅನೇಕರು ಇದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!