
ಬಳ್ಳಾರಿ / ಕಂಪ್ಲಿ : ಅಪಘಾತದಿಂದ ಕಷ್ಟದಲ್ಲಿರುವ ಇತರರ ಜೀವ ಉಳಿಸುವ ಉದ್ದೇಶದಿಂದ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಕಾರ್ಯ ಶ್ಲಾಘನಿಯವಾಗಿದ್ದು, ಅದಕ್ಕೆ ಸೇವಾ ಮನೋಭಾವನೆ ಬೆಳೆಸಿಕೊಳ್ಳುವುದು ಮುಖ್ಯವಾಗಿದೆ ಎಂದು ಮೆಟ್ರಿಯ ಗ್ರಾಮ ಪಂಚಾಯಿತಿ ಸದಸ್ಯ ಕುಮಾರ್ ಹೇಳಿದರು.
ತಾಲ್ಲೂಕಿನ ಮೆಟ್ರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸೋಮವಾರ ಶ್ರೀ ಶ್ರಾವಣ ಮಾಸದ 56ನೇ ವರ್ಷದ ಪುರಾಣ ಹಾಗೂ ಶ್ರೀ ಮೆಟ್ರಿ ಮಹಾದೇವ ತಾತವನವರ ಶ್ರೀ ಪ್ರಣವ ಜ್ಯೋತಿಯ 47ನೇ ಮಹಾರಥೋತ್ಸವ ಸವಿನೆನಪಿಗಾಗಿ ಶ್ರೀ ಗೌರ ಸಮುದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವದ ಪ್ರಯುಕ್ತ ಪ್ರಾಥಮಿಕ ಆರೋಗ್ಯ ಕೇಂದ್ರ ದೇವಸಮುದ್ರ ಸ್ವಾಮಿ ವಿವೇಕಾನಂದ ರಕ್ತ ಕೇಂದ್ರ ಬಳ್ಳಾರಿ ಸಹಯೋಗದಲ್ಲಿ ನಡೆದ ಸ್ವಯಂ ಪ್ರೇರಿತ ಎರಡು ದಿನದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.
ಸುಮಾರು 30 ಯೂನಿಟ್ ರಕ್ತ ಸಂಗ್ರಹ
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಎಲ್ಲಾ ಸದಸ್ಯರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ತಪಾಸಣಾಧಿಕಾರಿ ಜಗನ್ನಾಥ್ ತಾಲೂಕು, ಆರೋಗ್ಯ ಮೇಲ್ವಿಚಾರಕ ಬಸವರಾಜ್ ಸ್ವಾಮಿ ವಿವೇಕಾನಂದ ರಕ್ತ ಬಂಡಾರ ನಿಧಿಯ ಟೆಕ್ನಿಕಲ್ ಸೂಪರರ್ವೈಸರ್ ಮಂಜುನಾಥ, ಶಾಲಾ ಶಿಕ್ಷಕರು, ಆಶಾ ಕಾರ್ಯಕರ್ತರು ಹಾಗೂ ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್



















