ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗುರುಮಠಕಲ್ ಪಟ್ಟಣದ ಟೌನ್ ಹಾಲ್ ನಲ್ಲಿ ತಾಲೂಕು ನ್ಯಾಯಾಲಯ ಸ್ಥಾಪನೆ

ಗುರುಮಠಕಲ್ ಪಟ್ಟಣಕ್ಕೆ ನ್ಯಾಯಾಲಯ
ನ್ಯಾಯಾಧೀಶರಾದ ಮರುಳಸಿದ್ದರಾಧ್ಯ ಎಚ್‌.ಜೆ ಬಸ್ ಘಟಕದ ಹತ್ತಿರದ ಸ್ಥಳ ಪರಿಶೀಲನೆ ಮಾಡಿದರು.

ಗುರುಮಠಕಲ್ :ಕಳೆದ ಕೆಲವು ದಿನಗಳ ಹಿಂದೆ ಪಟ್ಟಣದಲ್ಲಿ ನ್ಯಾಯಾಲಯ ಪ್ರಾರಂಭಕ್ಕಾಗಿ ಟೌನ್ ಹಾಲ್ ಕಟ್ಟಡದಲ್ಲಿ ಕಾಮಗಾರಿ ನಡೆಯುತ್ತಿರುವುದನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮರುಳಸಿದ್ದರಾಧ್ಯ ಎಚ್‌.ಜೆ ಅವರು ಭೇಟಿ ನೀಡಿ ಪರಶೀಲನೆ ನಡೆಸಿದರು.

ಅವರು ತಾಲ್ಲೂಕು ನ್ಯಾಯಾಲಯ ಸ್ಥಾಪನೆಗೆ ಬಹುದಿನಗಳ ಬೇಡಿಕೆ ಇದ್ದು ಇದರಿಂದ ನ್ಯಾಯಾಲಯ ಕೆಲಸಕ್ಕೆ ಜಿಲ್ಲಾ ಕೇಂದ್ರಕ್ಕೆ ಅಲೆಯುವುದು ತಪ್ಪಲಿದೆ. ಶಾಶ್ವತ ಪರಿಹಾರ ಕಂಡುಕೊಳ್ಳಲು ಡಿಪೋ ಹತ್ತಿರದ ಸ್ಥಳ ಪರಿಶೀಲನೆ ಮಾಡಲಾಯಿತು.

ಗುರುಮಠಕಲ್ ನ್ಯಾಯಾಲಯ ಸೆಪ್ಟೆಂಬರ್ ತಿಂಗಳ ಉದ್ಘಾಟನಾ ಮಾಡಬೇಕು ಎಂದು ನ್ಯಾಯಾಧೀಶ ಮರುಳಸಿದ್ದರಾಧ್ಯ ಎಚ್.ಜೆ ತಿಳಿಸಿದರು.

ಟೌನ್ ಹಾಲ್ ಭವ್ಯ ಕಟ್ಟಡದಲ್ಲಿ ಬಹುದಿನಗಳ ಬೇಡಿಕೆಯಾದ ನ್ಯಾಯಾಲಯ ಕಟ್ಟಡ ಸ್ಥಾಪನೆಗೆ ಅವಶ್ಯವಿರುವ ಸ್ಥಳವನ್ನು ಭೇಟಿ ನೀಡಿ, ಪರಿಶೀಲನೆ ಮಾಡಿದರು.

ಗುರುಮಠಕಲ್ ವ್ಯಾಪ್ತಿಯ ಜನರು ಪ್ರತಿ ಕೆಲಸಕ್ಕೆ ಸುಮಾರು 40 ಕಿ.ಮೀ. ದೂರದ ಯಾದಗಿರಿಯನ್ನು ಅವಲಂಭಿಸಿದ್ದು, ಗುರುಮಠಕಲ್ ನಲ್ಲಿ ನ್ಯಾಯಾಲಯ ಸ್ಥಾಪನೆಯಿಂದ ಬಡ ಜನರಿಗೆ ಅನುಕೂಲವಾಗಲಿದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತನಾಡಿ, ಸಮಗ್ರ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ತಹಶಿಲ್ದಾರರ ಶಾಂತಗೌಡ ಬಿರಾದರ್, ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ರವೀಂದ್ರ ಎಸ್.ಪಾಟೀಲ್ ಪುರಸಭೆ ಮುಖ್ಯಾಧಿಕಾರಿ ಭಾರತಿ ಸಿ ದಂಡೋತಿ, ರಾಜರಮೇಶ ಗೌಡ, ಸಿಪಿಐ ವೀರಣ್ಣ ದೊಡ್ಡಮನಿ, ಪುರಸಭೆ ವ್ಯವಸ್ಥಾಪಕ ಮಲ್ಲಿಕಾರ್ಜುನ, ಎಎಸ್ಐ ಭೀಮಶಪ್ಪ ಕಾನಗಡ್ಡ, ಸಾಬಣ್ಣ ಗಣಪುರ, ಆನಂದ ನಿರೇಟಿ, ಕೃಷ್ಣಾ ಮೇದಾ, ದೇವಿಂದ್ರಪ್ಪ ಎಂ, ಗುರುನಾಥರೆಡ್ಡಿ ಅನಪುರ, ಕೃಷ್ಣಪ್ಪ ಸಿರಿಗೇಂ, ಮೋಹನ ಗಜರೆ, ಪಿಡಬ್ಲ್ಯುಡಿ ಎಇಇ ಪರಶುರಾಮ, ಸುನೀಲ್‌, ಸಂಜು ಕುಮಾರ್ ಚಂದಾಪುರ್, ದೊಡ್ಡ ಬಸವರಾಜ್, ಸರ್ವಯರ್, ಪವನ್ ವಕೀಲರು, ಪುರಸಭೆ ಸಿಬ್ಬಂದಿ ಕಂದಾಯ ಇಲಾಖೆಯ ಸಿಬ್ಬಂದಿ ಸೇರಿದಂತೆ ಇತರರಿದ್ದರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!