ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹತ್ತಿ,ಹಣ್ಣು-ಹಂಪಲು ಬೆಳೆ ಹಾನಿ ಸಮೀಕ್ಷೆ ನಡೆಸಿ ಪರಿಹಾರ ನೀಡಿ ನಿರುಪಾದಿ ಕೆ. ಗೋಮರ್ಸಿ ಆಗ್ರಹ.

ರಾಯಚೂರು :ಮುಂಗಾರಿನ ಆರಂಭದ ಅತಿಯಾದ ಮಳೆಯ ಪರಿಣಾಮದಿಂದಾಗಿ ಜಿಲ್ಲೆಯ ಸಾವಿರಾರು ಎಕರೆ ಹೆಕ್ಟೇರ್ ಪ್ರದೇಶದಲ್ಲಿ ರೈತರು ಬೆಳೆದ ಮುಂಗಾರು ಹತ್ತಿ ಹಣ್ಣು-ಹಂಪಲು ಬೆಳೆಗಳು ಕೊಳೆತು ನಾಶವಾಗಿದ್ದು ಹಾಗೂ ಬೆಳೆಗಳಿಗೆ ಕೀಟಬಾಧೆಯಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ ಹೀಗಾಗಿ ರೈತರು ಕಂಗಾಲಾಗಿದ್ದಾರೆ. ಹತ್ತಿಯ ಬೆಳೆ ತೊಳೆ ಹೊಡೆದು ಬಿಡಿಸುವ ಸಂದರ್ಭದಲ್ಲಿಯೇ ಮಳೆಯ ಪರಿಣಾಮದಿಂದಾಗಿ ಬೆಳೆ ಸಂಪೂರ್ಣ ನಾಶವಾಗಿರುವ ಘಟನೆಯ ಚಿತ್ರಣಗಳು ಇತ್ತೀಚಿನ ವಿವಿಧ ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಲ್ಲಿ ವರದಿಯಾಗಿದ್ದು ಲಕ್ಷಾಂತರ ರುಪಾಯಿ ಖರ್ಚು ವೆಚ್ಚದಲ್ಲಿ ಬೆಳೆದ ರೈತ ನಷ್ಟಕ್ಕೆ ಒಳಗಾಗಿದ್ದು ಕೂಡಲೇ ಸರ್ಕಾರ ಮತ್ತು ಜಿಲ್ಲಾಧಿಕಾರಿಗಳು ಜಿಲ್ಲೆಯ ರೈತರ ಬೆಂಬಲಕ್ಕೆ ನಿಂತು ಬೆಳೆ ಹಾನಿ ಸಮೀಕ್ಷೆ ನಡೆಸಿ ಶೀಘ್ರವಾಗಿ ಪರಿಹಾರ ನೀಡಬೇಕೆಂದು ಕೆ ಆರ್ ಎಸ್ ಪಕ್ಷದ ರಾಜ್ಯ ರೈತ ಘಟಕದ ಕಾರ್ಯದರ್ಶಿ ನಿರುಪಾದಿ ಕೆ ಗೊಮರ್ಸಿ ಪತ್ರಿಕಾ ಹೇಳಿಕೆ ಮುಖಾಂತರ ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!