ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀಮತಿ ಬಿ ಬಿ ದೇವದುರ್ಗ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ

ಬಾಗಲಕೋಟೆ : ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್
ಉಪನಿರ್ದೇಶಕರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ, ಬಾಗಲಕೋಟೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಹುನಗುಂದ ತಾಲೂಕಿನ ಹಿರೇಮಳಗಾವಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾಗಿರುವ ಶ್ರೀಮತಿ ಬಿ. ಬಿ. ದೇವದುರ್ಗ ಗುರುಮಾತೆಯರಿಗೆ 2025 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ನೀಡಲಾಯಿತು.
ಬಾಗಲಕೋಟೆಯ ಕಲಾಭವನದಲ್ಲಿ ಸೆಪ್ಟಂಬರ್ 5 ರಂದು ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಶ್ರೀ ಆರ್ ಬಿ ತಿಮ್ಮಾಪುರ್, ಬಾಗಲಕೋಟೆ ಸಂಸದರು ಆಗಿರುವ ಶ್ರೀ ಪಿ ಸಿ ಗದ್ದಿಗೌಡರ್, ಬಾಗಲಕೋಟೆಯ ಶಾಸಕರು ಆಗಿರುವ ಮಾನ್ಯ ಶ್ರೀ ಎಚ್ ವೈ ಮೇಟಿ ಹಾಗೂ ಬಾಗಲಕೋಟೆಯ ಜಿಲ್ಲಾಧಿಕಾರಿಗಳು ಶ್ರೀ ಸಂಗಪ್ಪ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಆಗಿರುವ ಶ್ರೀ ಶಶಿಧರ್ ಕೊರಿಯರ್ ಹಾಗೂ ಜಿಲ್ಲಾ ಉಪ ನಿರ್ದೇಶಕರು ಆಗಿರುವ ಶ್ರೀ ಎ ಸಿ ಮಣ್ಣಿಕೇರಿ ಮತ್ತು ಹುನಗುಂದ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಾನ್ಯ ಶ್ರೀಮತಿ ಜಾಸ್ಮಿನ್ ಕಿಲ್ಲೆದಾರ ಹಾಗೂ ಇನ್ನಿತರ ಗಣ್ಯ ಮಾನ್ಯರು ಈ ಅಭೂತಪೂರ್ವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಶ್ರೀಮತಿ ಬಿ ಬಿ ದೇವದುರ್ಗ ಮೇಡಂ ಇವರಿಗೆ ಸಮಸ್ತ ಹುನಗುಂದ ತಾಲೂಕಿನ ಶಿಕ್ಷಕ ಬಳಗ ಹಾಗೂ ಹಿರೇಮಳಗಾವಿ ಗ್ರಾಮದ ಗುರು ಹಿರಿಯರು ಮತ್ತು ಶಾಲೆಯ ಶಿಕ್ಷಕ ಬಳಗ ಹಾಗೂ ಪ್ರೀತಿಯ ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!