ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕು ವ್ಯಾಪ್ತಿಯಲ್ಲಿ ಬರುವ ಬುಡರಕಟ್ಟಿ ಗ್ರಾಮದಲ್ಲಿ ಹುಚ್ಚು ನಾಯಿ ಕಡಿತದಿಂದ ಐದು ಜನರು ಗಾಯಗೊಂಡು ಬೆಳವಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ತಾಲೂಕ ಸರ್ಕಾರಿ ಆಸ್ಪತ್ರೆ ಬೈಲಹೊಂಗಲಕ್ಕೆ ಕಳಿಸಲಾಗಿದೆ ಇದೇ ವಿಷಯವಾಗಿ ಗ್ರಾಮ ಪಂಚಾಯಿತ ಅಭಿವೃದ್ಧಿ ಅಧಿಕಾರಿಗಳಿಗೆ ಹಲವಾರು ಸರಿ ಫೋನ್ ಮಾಡಿದರೂ ಫೋನ್ ತೆಗೆಯುತ್ತಿಲ್ಲ ಹಾಗಿದ್ದರೆ ಇದರ ಗೋಳು ಕೇಳುವರು ಯಾರು ಎಂದು ಗ್ರಾಮಸ್ಥರು ಗೊಂದಲಕ್ಕೆ ಬಿದ್ದಿದ್ದಾರೆ.



















