ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಗುರು ಗಂಗಲಿಂಗ ಪ್ರಾಥಮಿಕ ಶಾಲೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡಾ ಶಿಕ್ಷಕರ ದಿನಾಚರಣೆಯನ್ನು ವಿದ್ಯಾರ್ಥಿಗಳು ಹಾಗೂ ಆಡಳಿತ ಮಂಡಳಿಯವರು ಕೂಡಿಕೊಂಡು ಅದ್ದೂರಿಯಾಗಿ ಆಚರಿಸಿದರು.
ಪ್ರತಿಯೊಬ್ಬ ವ್ಯಕ್ತಿಯು ಜೀವನದಲ್ಲಿ ಏನನ್ನಾದರೂ ಸಾಧನೆ ಮಾಡಬೇಕು ಎಂದರೆ ಅವನ ಹಿಂದೆ ಪ್ರಮುಖ ಪಾತ್ರ ವಹಿಸುವುದು ಒಬ್ಬ ಗುರು. ಪ್ರತಿಯೊಬ್ಬರಿಗೂ ಶಿಕ್ಷಣ ಹೇಗೆ ಮುಖ್ಯವೋ, ಹಾಗೇಯೇ ಆ ಶಿಕ್ಷಣ ನೀಡುವ ಗುರುವು ಅಷ್ಟೇ ಮುಖ್ಯ. ಗುರುವಿಲ್ಲದೆ ಗುರಿಯನ್ನು ತಲುಪುವುದು ಬಹಳ ಕಷ್ಟ. ಭರವಸೆಯನ್ನು ಹೆಚ್ಚಿಸುವ, ಕನಸನ್ನು ಸಾಕಾರಗೊಳಿಸುವ, ಕಲಿಕಾ ಆಸಕ್ತಿಯನ್ನು ಹುಟ್ಟು ಹಾಕುವ ಸೂತ್ರಧಾರನೇ ಶಿಕ್ಷಕ ಎಂದರೆ ತಪ್ಪಾಗಲಾರದು, ಪ್ರತಿ ವ್ಯಕ್ತಿಯ ಬದುಕಿನ ದೀಪವಾಗಿರುವ ಶಿಕ್ಷಕರಿಗೂ ಸಹ ಒಂದು ದಿನವನ್ನು ಮೀಸಲಿಡಲಾಗಿದೆ ಅದುವೇ ಸೆಪ್ಟೆಂಬರ್ 5 ಈ ದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಇಡೀ ದೇಶವೇ ಸಂಭ್ರಮದಿಂದ ಆಚರಿಸುತ್ತದೆ. ಈ ದಿನದಂದು ಪ್ರತಿಯೊಬ್ಬರು ತಮಗೆ ಶಿಕ್ಷಣವನ್ನು ನೀಡಿದ ಶಿಕ್ಷಕರನ್ನು ನೆನೆದು ಧನ್ಯವಾದವನ್ನು ಹೇಳುತ್ತಾರೆ.
ಅದೇ ರೀತಿಯಾಗಿ ಶಾಲೆಯ ವಿದ್ಯಾರ್ಥಿಗಳು ತಮ್ಮ ತಮ್ಮ ಅನಿಸಿಕೆಗಳನ್ನು ಹೇಳಿದರು. ತದ ನಂತರ ಶಾಲೆಯ ಮುಖ್ಯೋಪಾಧ್ಯಾಯರು ಪ್ರಭು ಪಾಟೀಲ್ ಅವರು ತಮ್ಮ ಅನಿಸಿಕೆಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಆಡಳಿತ ಮಂಡಳಿಯ ಸದಸ್ಯರು ಶಾಲೆಯ ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವರದಿ ಮನೋಜ್ ನಿಂಬಾಳ



















