
ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಶ್ರೀ ವರ್ಧಮಾನ ಶಿಕ್ಷಣ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕಾ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಅಥಣಿಯ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸವದಿಯವರು ಸಸಿಗೆ ನೀರು ಹಾಕುವುದರ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಂಕೋನಟ್ಟಿ ಗ್ರಾಮ ಪಂಚಾಯಿತ ಅಧ್ಯಕ್ಷರಾದ ಶ್ರೀ ಶಂಕರ ಗಡದೆ, ಶ್ರೀ ವರ್ಧಮಾನ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಶ್ರೀಕಾಂತ ಅಸ್ಕಿ, ಗಣ್ಯರಾದ ಶ್ರೀ ಎ, ಸಿ,ಪಾಟೀಲ,ಶ್ರೀ ರಾಜುಗೌಡ ಪಾಟೀಲ,ಶ್ರೀ ಅರುಣ ಯಲಗುದ್ರಿ, ಶ್ರೀ ಅನಂತ ಬಸರಿಕೊಡಿ, ಹಾಗೂ ಹಿರಿಯ ಮುಖಂಡರು ಮತ್ತು ಶಿಕ್ಷಕ ಶಿಕ್ಷಕಿಯರು, ವಿಧ್ಯಾರ್ಥಿ ವಿದ್ಯಾರ್ಥಿನಿಯರು ಮತ್ತು ಪಾಲಕರು ಉಪಸ್ಥಿತರಿದ್ದರು.
ವರದಿ. ವಿಠ್ಠಲ ಖೋಕಾಟೆ



















