ಬಳ್ಳಾರಿ / ಕಂಪ್ಲಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಕಂಪ್ಲಿ ತಾಲೂಕು, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ (ಕಂಪ್ಲಿ) ಜನ ಜಾಗೃತಿ ವೇದಿಕೆ ವತಿಯಿಂದ ಸೋಮವಾರ ಪಟ್ಟಣದ ಷಾಮಿಯಾಚಂದ್ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ, ಮಾದಕ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರೌಢಶಾಲಾ ಶಿಕ್ಷಣ ಸಂಯೋಜಕರಾದ ಟಿ. ಎಂ. ಬಸವರಾಜ್ ಪ್ರತಿಯೊಬ್ಬ ವಿದ್ಯಾರ್ಥಿಯು ಆರೋಗ್ಯಕರವಾಗಿರುವ ಜೀವನ ನಡೆಸಬೇಕು ಯಾವುದೇ ಅನಾರೋಗ್ಯಕರ ಅಭ್ಯಾಸಗಳನ್ನು ಹಾಕಿಕೊಳ್ಳದೆ ಉತ್ತಮ ಶಿಕ್ಷಣ ಪಡೆಯಬೇಕು. ಪರಮ ಪೂಜ್ಯ ಶ್ರೀ ವೀರೇಂದ್ರ ಹೆಗಡೆ ಜೀ ಪೂಜ್ಯರ ಕೊಡುಗೆ ಅವರ ಆಲೋಚನೆಗಳು ತುಂಬಾ ಉನ್ನತಮಟ್ಟದಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಜಿಲಾನ್ ಸಾಬ್ ಬಡಿಗೇರ ಉಪನ್ಯಾಸ ನೀಡಿ ವಿದ್ಯಾರ್ಥಿಗಳು ದುಶ್ಚಟಕ್ಕೆ ಬಲಿಯಾಗದೆ ಇರುವ ಕುರಿತು ದುಶ್ಚಟಗಳಿಂದ ದೂರವಿರಬೇಕು ಮಾದಕ ವಸ್ತುಗಳಿಂದ ಆಗುವ ಪರಿಣಾಮಗಳ ಕುರಿತು ಸಂಪೂರ್ಣವಾಗಿ ವಿದ್ಯಾರ್ಥಿಗಳಿಗೆ ಸವಿಸ್ತಾರವಾದ ಮಾಹಿತಿಯನ್ನು ನೀಡಿದರು. ನಂತರ ಮಾತನಾಡಿದ ಶಾಲೆಯ ಸಹ ಶಿಕ್ಷಕರಾದ ಡಾ. ಸುನಿಲ್ ಕುಮಾರ ವಿದ್ಯಾರ್ಥಿಗಳಿಗೆ ಉದಾಹರಣೆ ಸಹಿತ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು ಹಾಗೂ ಉತ್ತಮ ವ್ಯಕ್ತಿಗಳಾಗಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರು ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಹರ್ಷವನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ, ಕೃಷಿ ಯೋಜನೆ ಅಧಿಕಾರಿ ಸಂಜೀವ್ ಕುಮಾರ್, ವಲಯದ ಮೇಲ್ವಿಚಾರಕರಾದ ಎಚ್. ಮಂಜಣ್ಣ, ಸಂದೀಪ್, ಸೇವಾ ಪ್ರತಿನಿಧಿಗಳಾದ ಮಾಲಾ, ಹಸೀನಾ ಸೇರಿದಂತೆ ಶಾಲೆಯ ವಿದ್ಯಾರ್ಥಿಗಳು ಹಾಜರಿದ್ದರು.
ವರದಿ : ಕರುನಾಡ ಕಂದ



















