ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕುರಿ ಮೇಕೆ ನಗದು ಹಾಗೂ ದೇವಸ್ಥಾನಗಳಲ್ಲಿ ಕಳವು ಪೊಲೀಸ್ ಇಲಾಖೆ ಸೂಕ್ತ ಕ್ರಮ ಜರುಗಿಸಿ : ರೈತ ಸಂಘಟನೆ ಅಧ್ಯಕ್ಷ ಅಮ್ಜದ್ ಖಾನ್ ಮನವಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುತ್ತಮುತ್ತಲು ದೇವಸ್ಥಾನ ಹುಂಡಿಗಳು, ಕುರಿ ಮೇಕೆ ಹಾಗೂ ನಗದು ಕಳವು ಆಗಿದೆ ಹಾಗೆಯೇ ಕಳೆದ ಒಂದು ತಿಂಗಳಿನಲ್ಲಿ ಎರಡು ದೇವಸ್ಥಾನಗಳಲ್ಲಿ ಕಳ್ಳತನ ನಡೆದಿದ್ದು, ಇದರ ವಿರುದ್ಧ ರೈತ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ. ಸೋಮವಾರ ತಡರಾತ್ರಿ ಅಜ್ಜಿಪುರ – ಹನೂರು ಮಾರ್ಗದಲ್ಲಿರುವ ಶ್ರೀ ಕಣಿವೆ ಆಂಜನೇಯ ಸ್ವಾಮಿ ದೇವಾಲಯದಲ್ಲಿನ ಹುಂಡಿಯಲ್ಲಿದ್ದ ಹಣವನ್ನು ಕಳವು ಮಾಡಿದ್ದಾರೆ. ಇದೇ ತರಹ , ಸುಮಾರು 15 ದಿನಗಳ ಹಿಂದೆ ದೊಡ್ಡಲತ್ತೂರು ಗ್ರಾಮದ ಮಾರಮ್ಮನ ದೇವಾಲಯದಲ್ಲಿಯೂ ಕಳ್ಳತನ ನಡೆದಿತ್ತು. ಆದರೆ ಈವರೆಗೂ ಯಾವುದೇ ಆರೋಪಿಗಳ ಪತ್ತೆಯಾಗಿಲ್ಲ. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ಇದೆಲ್ಲವೊಂದೆ ಕಡೆ, ರೈತರ ಜಮೀನಿನಲ್ಲಿ ಕೇಬಲ್ ಕಳುವು, ಮೇಕೆಗಳ ಕಳವು ಕೂಡ ನೆಡೆದಿದೆ ಎನ್ನಲಾಗಿದೆ ಇದ್ದರಿಂದ ಗ್ರಾಮೀಣ ಜನರು ಭೀತಿಯಿಂದಿದ್ದಾರೆ.

ಆದ್ದರಿಂದ ಪೊಲೀಸ್ ಇಲಾಖೆಯು ಇದರ ಬಗ್ಗೆ ಸೂಕ್ತ ಕ್ರಮ ತೆಗೆದು ರೈತರಿಗೆ ಅನುಕೂಲ ಮಾಡಿ ಕೊಡಬೇಕು ಹಾಗೆಯೇ ಈ ಕಳ್ಳತನ ಮಾಡುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದು ಕಳ್ಳರಿಗೆ ಶಿಕ್ಷೆ ಕೊಡಬೇಕೆಂದು ರೈತ ಸಂಘಟನೆಯ ಅಧ್ಯಕ್ಷ ಅಮ್ಜದ್ ಖಾನ್ ಮನವಿ ಮಾಡಿದ್ದಾರೆ.

ವರದಿ: ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!