ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನೌಕರರ ಉಚಿತ ಆರೋಗ್ಯ ಶಿಬಿರ ಹಾಗೂ ಸಾಮಾನ್ಯ ಸಭೆ

ಬಾಗಲಕೋಟೆ /ಹುನಗುಂದ: ಪ್ರತಿಯೊಬ್ಬ ನೌಕರರು ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು, ಇಂತಹ ಆರೋಗ್ಯ ಶಿಬಿರವನ್ನು  ಏರ್ಪಡಿಸಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯ ಶ್ಲಾಘನೀಯ ಎಂದು ತಹಶೀಲ್ದಾರ್  ಪ್ರದೀಪಕುಮಾರ ಹಿರೇಮಠ ಹೇಳಿದರು.
ಇಲ್ಲಿನ ಸಂಗಮೇಶ್ವರ ಕಲ್ಯಾಣ ಮಂಟಪದಲ್ಲಿ  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಏರ್ಪಡಿಸಿದ್ದ ನೌಕರರ ಉಚಿತ ಆರೋಗ್ಯ ಶಿಬಿರ ಹಾಗೂ ಸಾಮಾನ್ಯ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂಗಮೇಶ ಪಾಟೀಲ ಮಾತನಾಡಿ, ಇಂದಿನ ತಾಂತ್ರಿಕ ಹಾಗೂ ಜಾಗತಿಕ ಯುಗದಲ್ಲಿ ನೌಕರರು ಒತ್ತಡಕ್ಕೆ ಒಳಗಾಗಿ ಕಾರ್ಯ ನಿರ್ವಹಿಸುವುದು ಅನಿವಾರ್ಯವಾಗಿದೆ. ಆರೋಗ್ಯದ ಕಡೆ ಕಾಳಜಿಯನ್ನು ಲೆಕ್ಕಿಸದೆ ದುಡಿಯುತ್ತೇವೆ. ನೌಕರರು ನಿಯಮಿತವಾಗಿ ಆರೋಗ್ಯ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಮುತ್ತಣ್ಣ ಕಲಗೋಡಿ, ಮಹಾಂತೇಶ ನಾಡಗೌಡ, ತಾಲ್ಲೂಕು ಪಂಚಾಯತ್ ಇಒ ಮುರಳೀಧರ ದೇಶಪಾಂಡೆ, ಬಿಇಒ ಜಾಸ್ಮೀನ್ ಕಿಲ್ಲೇದಾರ, ಸದಾಶಿವ ಗುಡಗುಂಟಿ, ಡಿ ಎಸ್ ಯತ್ನಟ್ಟಿ, ಸವಿತಾ ಸಜ್ಜನ, ರಾಜೇಶ್ವರಿ ಗೌಡರ, ಎಸ್ ಜಿ ಹುದ್ದಾರ, ಮಹಾಂತೇಶ ಪಾಟೀಲ, ಶರಣು ಚಿತ್ತವಾಡಗಿ, ರಮೇಶ ಮಿಣಜಗಿ ಉಪಸ್ಥಿತರಿದ್ದರು.
ಹುನಗುಂದದ ಸಂಗಮೇಶ್ವರ ಕಲ್ಯಾಣ ಮಂಟಪದಲ್ಲಿ  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಏರ್ಪಡಿಸಿದ್ದ ನೌಕರರ ಉಚಿತ ಆರೋಗ್ಯ ಶಿಬಿರದಲ್ಲಿ ಬಿಇಒ ಜಾಸ್ಮೀನ್ ಕಿಲ್ಲೇದಾರ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!