ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಲಿಂಗಾಯತ ಧರ್ಮ ಸ್ವತಂತ್ರ ಧರ್ಮವಾಗಿದೆ : ಚಿತ್ತರಗಿ ಸಂಸ್ಥಾನಮಠ ಹುನಗುಂದದ ಗುರುಮಹಾಂತ ಸ್ವಾಮೀಜಿ

ಬಾಗಲಕೋಟೆ/ ಹುನಗುಂದ: ೧೨ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ ಲಿಂಗಾಯತ ಧರ್ಮ ಸ್ವತಂತ್ರ ಧರ್ಮವಾಗಿದೆ ಎಂದು ಚಿತ್ತರಗಿ ಸಂಸ್ಥಾನಮಠ ಹುನಗುಂದದ ಗುರುಮಹಾಂತ ಸ್ವಾಮೀಜಿ ಹೇಳಿದರು.
ಪಟ್ಟಣದ ವಿಜಯ ಮಹಾಂತೇಶ್ವರ ಮಠದಲ್ಲಿ ನಡೆದ ಪೂರ್ವಬಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ರಾಜ್ಯ ಸರ್ಕಾರ ನಡೆಸಲು ಉದ್ದೇಶಿಸಿರುವ ಜಾತಿಗಣತಿಯಲ್ಲಿ ಲಿಂಗಾಯತ ಧರ್ಮದ ಒಳಪಂಗಡದವರು ಧರ್ಮದ ಕಾಲಂ ನಲ್ಲಿ ಲಿಂಗಾಯತ ಎಂದು, ಜಾತಿ ಕಾಲಂ ನಲ್ಲಿ ಉಪಪಂಗಡದ ಹೆಸರು ನೋಂದಾಯಿಸುವಂತೆ ಜಾಗೃತಿ ಮೂಡಿಸುವ ಕಾರ್ಯ ಆಗಬೇಕಿದೆ. ಕರ್ನಾಟಕ ಸರ್ಕಾರ ಬಸವಣ್ಣ ಅವರನ್ನು ಕರ್ನಾಟಕ ಸಂಸ್ಕೃತಿಕ ನಾಯಕ ಎಂದು ಘೋಷಿಸಿ ಒಂದು ವರ್ಷವಾದ ಪ್ರಯುಕ್ತ ನಾಡಿನ ಜನತೆಗೆ ಬಸವ ತತ್ವದ ಆಚರಣೆ ಕುರಿತು ಜಾಗೃತಿ ಮೂಡಿಸಲು ಸೆ.೧೦ ರಂದು ಬಾಗಲಕೋಟೆಯಲ್ಲಿ ಬಸವ ಸಂಸ್ಕೃತಿ ಉತ್ಸವ ನಡೆಯಲಿದೆ ಎಂದರು.
ಜಾಗತಿಕ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಎಸ್. ಆರ್. ಕಡಿವಾಲ ಮಾತನಾಡಿ, ಬಸವಣ್ಣನವರ ವಿದ್ಯಾಭೂಮಿ ಹಾಗೂ ಐಕ್ಯ ಭೂಮಿ ನಮ್ಮ ಜಿಲ್ಲೆ ಆಗಿರುವುದರಿಂದ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ಸಿಗೆ ಕಾರಣರಾಬೇಕು ಎಂದರು.
ನ್ಯಾಯವಾದಿ ಮಹಾಂತೇಶ ಅವಾರಿ ಮಾತನಾಡಿ ಬಸವಣ್ಣನವರ ತತ್ವ ಆದರ್ಶಗಳು, ಲಿಂಗಾಯತ ಧರ್ಮ ಸಿದ್ಧಾಂತಗಳನ್ನು ಎಲ್ಲರ ಮನಸ್ಸುಗಳಿಗೆ ಮುಟ್ಟಿಸುವ ಕಾರ್ಯ ಇದಾಗಿದೆ ಎಂದರು.
ಹಿರಿಯರಾದ ಎಂ ಎನ್. ತೇನಹಳ್ಳಿ, ಸಿ. ಜಿ. ಹವಾಲ್ದಾರ ಹಾಗೂ ಎಸ್.ಕೆ ಕೊನೆಸಾಗರ ಅವರು, ನಾವು ಮೊದಲು ಲಿಂಗಾಯತರು ಎಂಬ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗಿದೆ ಎಂದರು.
ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಸಂಚಾಲಕ ಬಸವರಾಜ ಕಡಪಟ್ಟಿ, ಶಿವಣ್ಣ ನಾಗೂರ, ಡಾ.ಮಾಂತೇಶ ಕಡಪಟ್ಟಿ, ಅಶೋಕ ಭಾವಿಕಟ್ಟಿ, ಸಿದ್ದಲಿಂಗಪ್ಪ ಬೀಳಗಿ, ಎಂ ಎಸ್ ಮಠ, ಎಸ್. ಜಿ.ಎಮ್ಮಿ, ಸಿ. ಬಿ. ಸಜ್ಜನ, ವೀರೇಶ ಕುರ್ತಕೋಟಿ, ಶಿವಪ್ಪ ಹಡಪದ, ಸಂಗಮೇಶ ಹೊದ್ಲೂರ, ಅಕ್ಕನ ಬಳಗದ ಸದಸ್ಯರು ಇದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!